ಪರಮ ಗೀತ 2 : 1 (IRVKN)
ನಲ್ಲ ನಾನು ಶಾರೋನಿನ* ಶಾರೋನಿನ ಶಾರೋನ್: ಇಸ್ರಾಯೇಲಿನ ಮೆಡಿಟರೇನಿಯನ್ ಕರಾವಳಿ ಪ್ರಾಂತ್ಯವನ್ನು ಸೂಚಿಸುವ ಸ್ಥಳದ ಹೆಸರಾಗಿದೆ (ಯೆಶಾ 35:2; 65:10). ಆದರೆ ಪದ ವಾಸ್ತವವಾದ ಅರ್ಥವೇನೆಂದರೆ ಬಯಲು ಅಥವಾ ವಿಶಾಲ ಮತ್ತು ಸಮತಟ್ಟಾದ ಮೇಲ್ಮೈ ಪ್ರದೇಶ. ನೆಲಸಂಪಿಗೆ, ತಗ್ಗಿನ ತಾವರೆ.
ಪರಮ ಗೀತ 2 : 2 (IRVKN)
ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.
ಪರಮ ಗೀತ 2 : 3 (IRVKN)
ನಲ್ಲೆ ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
ಪರಮ ಗೀತ 2 : 4 (IRVKN)
ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.
ಪರಮ ಗೀತ 2 : 5 (IRVKN)
ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.
ಪರಮ ಗೀತ 2 : 6 (IRVKN)
ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ, ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ!
ಪರಮ ಗೀತ 2 : 7 (IRVKN)
ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
ಪರಮ ಗೀತ 2 : 8 (IRVKN)
ಎರಡನೆಯ ಗೀತೆ - ನಲ್ಲೆ ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;
ಪರಮ ಗೀತ 2 : 9 (IRVKN)
ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
ಪರಮ ಗೀತ 2 : 10 (IRVKN)
ನಲ್ಲ ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
ಪರಮ ಗೀತ 2 : 11 (IRVKN)
ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು;
ಪರಮ ಗೀತ 2 : 12 (IRVKN)
ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;
ಪರಮ ಗೀತ 2 : 13 (IRVKN)
ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
ಪರಮ ಗೀತ 2 : 14 (IRVKN)
ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”
ಪರಮ ಗೀತ 2 : 15 (IRVKN)
ತೋಟಗಳನ್ನು ಹಾಳುಮಾಡುವ ನರಿಗಳನ್ನು ನರಿಗಳನ್ನು “ನರಿಗಳು” ಬಹುಶಃ ಯುವತಿಯರ ಪ್ರೀತಿಗಾಗಿ ಸ್ಪರ್ಧಿಸುವ ಇತರ ಪುರುಷರನ್ನು ಸೂಚಿಸುತ್ತದೆ. , ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು.
ಪರಮ ಗೀತ 2 : 16 (IRVKN)
ನಲ್ಲೆ ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
ಪರಮ ಗೀತ 2 : 17 (IRVKN)
ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.

1 2 3 4 5 6 7 8 9 10 11 12 13 14 15 16 17