ಪರಮ ಗೀತ 3 : 1 (IRVKN)
ರಾತ್ರಿಯಲ್ಲಿ ಹಾಸಿಗೆಯ ಮೇಲೆ [QBR2] ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, [QBR2] ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. [QBR]
ಪರಮ ಗೀತ 3 : 2 (IRVKN)
ನಾನು, “ಎದ್ದು ಊರಿನಲ್ಲಿ ತಿರುಗುವೆನು, [QBR2] ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ [QBR2] ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, [QBR2] ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. [QBR]
ಪರಮ ಗೀತ 3 : 3 (IRVKN)
ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, [QBR2] “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು. [QBR]
ಪರಮ ಗೀತ 3 : 4 (IRVKN)
ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ [QBR2] ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, [QBR2] ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು. [QBR]
ಪರಮ ಗೀತ 3 : 5 (IRVKN)
ಯೆರೂಸಲೇಮಿನ ಮಹಿಳೆಯರೇ, [QBR2] ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, [QBR2] ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು [QBR2] ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. {ಮೂರನೆಯ ಗೀತೆ - ಸ್ತ್ರೀಯರು}
ಪರಮ ಗೀತ 3 : 6 (IRVKN)
ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, [QBR2] ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, [QBR2] ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು? [QBR]
ಪರಮ ಗೀತ 3 : 7 (IRVKN)
ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, [QBR2] ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ. [QBR]
ಪರಮ ಗೀತ 3 : 8 (IRVKN)
ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. [QBR2] ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ. [QBR]
ಪರಮ ಗೀತ 3 : 9 (IRVKN)
ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು [QBR2] ಲೆಬನೋನಿನ ಮರದಿಂದ ಮಾಡಿಸಿದ್ದಾನೆ. [QBR]
ಪರಮ ಗೀತ 3 : 10 (IRVKN)
ಅದರ ಕಂಬಗಳನ್ನು ಬೆಳ್ಳಿಯಿಂದಲೂ, [QBR2] ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, [QBR2] ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. [QBR2] ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು [QBR2] ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು. [QBR]
ಪರಮ ಗೀತ 3 : 11 (IRVKN)
ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ [QBR2] ರಾಜನಾದ ಸೊಲೊಮೋನನನ್ನು ನೋಡ ಬನ್ನಿ. [QBR2] ಅವನು ವಿವಾಹ ದಿನದ ಉತ್ಸವದಂದು [QBR2] ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು [QBR2] ಆತ ಧರಿಸಿರುವುದನ್ನು ನೋಡಬನ್ನಿ! [PE]

1 2 3 4 5 6 7 8 9 10 11

BG:

Opacity:

Color:


Size:


Font: