ಪರಮ ಗೀತ 4 : 1 (IRVKN)
ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! [QBR2] ಆಹಾ, ನೀನು ಎಷ್ಟು ಸುಂದರಿ! [QBR2] ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, [QBR2] ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ. [QBR]
ಪರಮ ಗೀತ 4 : 2 (IRVKN)
ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, [QBR2] ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ. [QBR]
ಪರಮ ಗೀತ 4 : 3 (IRVKN)
ನಿನ್ನ ತುಟಿಗಳು ಕೆಂಪು ದಾರದಂತಿವೆ. [QBR2] ನಿನ್ನ ಬಾಯಿ ರಮ್ಯ. [QBR2] ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ. [QBR]
ಪರಮ ಗೀತ 4 : 4 (IRVKN)
ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, [QBR2] ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ. [QBR]
ಪರಮ ಗೀತ 4 : 5 (IRVKN)
ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ [QBR2] ಅವಳಿ ಜಿಂಕೆಮರಿಗಳಂತಿವೆ. [QBR]
ಪರಮ ಗೀತ 4 : 6 (IRVKN)
ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ [QBR2] ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು. [QBR]
ಪರಮ ಗೀತ 4 : 7 (IRVKN)
ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, [QBR2] ನಿನ್ನಲ್ಲಿ ಯಾವ ಕೊರತೆಯೂ ಇಲ್ಲ. [QBR]
ಪರಮ ಗೀತ 4 : 8 (IRVKN)
ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. [QBR2] ಬಾ ನನ್ನೊಂದಿಗೆ, ಲೆಬನೋನಿನಿಂದ, [QBR2] ಇಳಿದು ಬಾ ಅಮಾನದ ತುದಿಯಿಂದ, [QBR2] ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. [QBR2] ಹೊರಟು ಬಾ, ಸಿಂಹಗಳ ಗುಹೆಗಳಿಂದ [QBR2] ಚಿರತೆಗಳ ಗುಡ್ಡಗಳಿಂದ. [QBR]
ಪರಮ ಗೀತ 4 : 9 (IRVKN)
ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; [QBR2] ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ. [QBR]
ಪರಮ ಗೀತ 4 : 10 (IRVKN)
ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! [QBR2] ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! [QBR2] ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ! [QBR]
ಪರಮ ಗೀತ 4 : 11 (IRVKN)
ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; [QBR2] ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, [QBR2] ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ. [QBR]
ಪರಮ ಗೀತ 4 : 12 (IRVKN)
ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, [QBR2] ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ. [QBR]
ಪರಮ ಗೀತ 4 : 13 (IRVKN)
ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, [QBR2] ಜಟಮಾಂಸಿ ಮತ್ತು ಗೋರಂಟೆಗಳು, [QBR]
ಪರಮ ಗೀತ 4 : 14 (IRVKN)
ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, [QBR2] ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ. [QBR]
ಪರಮ ಗೀತ 4 : 15 (IRVKN)
ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, [QBR2] ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.
ಪರಮ ಗೀತ 4 : 16 (IRVKN)
{ನಲ್ಲೆ} [PS] ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! [QBR2] ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. [QBR2] ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ. [PE]

1 2 3 4 5 6 7 8 9 10 11 12 13 14 15 16

BG:

Opacity:

Color:


Size:


Font: