ಪರಮ ಗೀತ 5 : 1 (IRVKN)
ನಲ್ಲ ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.
ಪರಮ ಗೀತ 5 : 2 (IRVKN)
ನಾಲ್ಕನೆಯ ಗೀತೆ - ನಲ್ಲೆ ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.
ಪರಮ ಗೀತ 5 : 3 (IRVKN)
“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
ಪರಮ ಗೀತ 5 : 4 (IRVKN)
ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು.
ಪರಮ ಗೀತ 5 : 5 (IRVKN)
ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.
ಪರಮ ಗೀತ 5 : 6 (IRVKN)
ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.
ಪರಮ ಗೀತ 5 : 7 (IRVKN)
ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.
ಪರಮ ಗೀತ 5 : 8 (IRVKN)
ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
ಪರಮ ಗೀತ 5 : 9 (IRVKN)
ಸ್ತ್ರೀಯರು ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
ಪರಮ ಗೀತ 5 : 10 (IRVKN)
ನಲ್ಲೆ ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; * ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು. ಅಥವಾ ನನ್ನ ನಲ್ಲನು ಬಿಳುಪು ಮತ್ತು ಕೆಂಪು ಬಣ್ಣವುಳ್ಳವನು. ಅವನಿಗೆ ಸಮಾನರು ಯಾರು ಇಲ್ಲ ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.
ಪರಮ ಗೀತ 5 : 11 (IRVKN)
ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.
ಪರಮ ಗೀತ 5 : 12 (IRVKN)
ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ.
ಪರಮ ಗೀತ 5 : 13 (IRVKN)
ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.
ಪರಮ ಗೀತ 5 : 14 (IRVKN)
ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.
ಪರಮ ಗೀತ 5 : 15 (IRVKN)
ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.
ಪರಮ ಗೀತ 5 : 16 (IRVKN)
ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.
❮
❯
1
2
3
4
5
6
7
8
9
10
11
12
13
14
15
16