ಪರಮ ಗೀತ 6 : 1 (IRVKN)
ಸ್ತ್ರೀಯರು ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ನಿನ್ನೊಂದಿಗೆ ಸೇರಿ ನಾವು ಅವನನ್ನು ಹುಡುಕೋಣವೇ? ಹೇಳು, ನಿನ್ನ ನಲ್ಲನು ಹೋದುದೆಲ್ಲಿಗೆ?
ಪರಮ ಗೀತ 6 : 2 (IRVKN)
ನಲ್ಲೆ ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.
ಪರಮ ಗೀತ 6 : 3 (IRVKN)
ಎನ್ನಿನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
ಪರಮ ಗೀತ 6 : 4 (IRVKN)
ಐದನೆಯ ಗೀತೆ - ನಲ್ಲ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!
ಪರಮ ಗೀತ 6 : 5 (IRVKN)
ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಅವು ನನ್ನನ್ನು ಹೆದರಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆಯಂತಿದೆ.
ಪರಮ ಗೀತ 6 : 6 (IRVKN)
ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
ಪರಮ ಗೀತ 6 : 7 (IRVKN)
ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
ಪರಮ ಗೀತ 6 : 8 (IRVKN)
ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು.
ಪರಮ ಗೀತ 6 : 9 (IRVKN)
ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ.
ಪರಮ ಗೀತ 6 : 10 (IRVKN)
ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?
ಪರಮ ಗೀತ 6 : 11 (IRVKN)
ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.
ಪರಮ ಗೀತ 6 : 12 (IRVKN)
ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.
ಪರಮ ಗೀತ 6 : 13 (IRVKN)
ನಲ್ಲೆ ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?

1 2 3 4 5 6 7 8 9 10 11 12 13