ಪರಮ ಗೀತ 7 : 1 (IRVKN)
ನಲ್ಲ ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.
ಪರಮ ಗೀತ 7 : 2 (IRVKN)
ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.
ಪರಮ ಗೀತ 7 : 3 (IRVKN)
ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.
ಪರಮ ಗೀತ 7 : 4 (IRVKN)
ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.
ಪರಮ ಗೀತ 7 : 5 (IRVKN)
ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.
ಪರಮ ಗೀತ 7 : 6 (IRVKN)
ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!
ಪರಮ ಗೀತ 7 : 7 (IRVKN)
ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು.
ಪರಮ ಗೀತ 7 : 8 (IRVKN)
ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.
ಪರಮ ಗೀತ 7 : 9 (IRVKN)
ನಲ್ಲೆ ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ,* ಉತ್ತಮ ದ್ರಾಕ್ಷಾರಸದ ಹಾಗಿರಲಿ, ಅಥವಾ ನಿನ್ನ ಬಾಯು ಉತ್ತಮ ದ್ರಾಕ್ಷಾರಸದಂತಿರಲಿ. ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.
ಪರಮ ಗೀತ 7 : 10 (IRVKN)
ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.
ಪರಮ ಗೀತ 7 : 11 (IRVKN)
ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ ಅಥವಾ ಅಡವಿಯ ಹೂವುಗಳ ಮಧ್ಯದಲ್ಲಿ ವಾಸಮಾಡುವ. !
ಪರಮ ಗೀತ 7 : 12 (IRVKN)
ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.
ಪರಮ ಗೀತ 7 : 13 (IRVKN)
ಕಾಮಜನಕ ವೃಕ್ಷಗಳು ಕಾಮಜನಕ ವೃಕ್ಷಗಳು ಮ್ಯಾಂಡ್ರೇಕ್ಸ್: ಅತ್ಯಂತ ಸಿಹಿಯಾದ ವಾಸನೆಯ ಹೂವುಗಳುಳ್ಳ, ಲೈಂಗಿಕ ಆಸೆಯನ್ನು ಹುಟ್ಟಿಸುವ ಮತ್ತು ಫಲವತ್ತತೆಯನ್ನು ಉತ್ತೇಜಿಸುವ ಹಣ್ಣನ್ನು ಉತ್ಪತ್ತಿ ಮಾಡುವ ಒಂದು ವೃಕ್ಷವಾಗಿದೆ ಎಂದು ನಂಬಲಾಗಿದೆ (ಆದಿ 30:14-16). ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

1 2 3 4 5 6 7 8 9 10 11 12 13