ಪರಮ ಗೀತ 8 : 1 (IRVKN)
ನಲ್ಲೆ ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.
ಪರಮ ಗೀತ 8 : 2 (IRVKN)
ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ* ಆಕೆಯು ನಿನಗೆ ಅಥವಾ ನೀನು ನನಗೆ. ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.
ಪರಮ ಗೀತ 8 : 3 (IRVKN)
ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು.
ಪರಮ ಗೀತ 8 : 4 (IRVKN)
ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
ಪರಮ ಗೀತ 8 : 5 (IRVKN)
ಸ್ತ್ರೀಯರು ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.
ಪರಮ ಗೀತ 8 : 6 (IRVKN)
ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.
ಪರಮ ಗೀತ 8 : 7 (IRVKN)
ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ † ಅವನಿಗೆ ಅಥವಾ ಅದಕ್ಕೆ. ತಿರಸ್ಕಾರ.
ಪರಮ ಗೀತ 8 : 8 (IRVKN)
ಆರನೆಯ ಗೀತೆ - ಸೋದರರು ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?
ಪರಮ ಗೀತ 8 : 9 (IRVKN)
ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.
ಪರಮ ಗೀತ 8 : 10 (IRVKN)
ನಲ್ಲೆ ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.‡ ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು. ಅಥವಾ ಆಗ ನನ್ನ ಪ್ರಿಯನು ನಾನು ಪ್ರೌಢಳೆಂದು ಯೋಚಿಸುತ್ತಾನೆ.
ಪರಮ ಗೀತ 8 : 11 (IRVKN)
ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು§ ಬೆಳ್ಳಿ ನಾಣ್ಯಗಳನ್ನು ಒಂದು ಬೆಳ್ಳಿ ನಾಣ್ಯವು ಒಂದು ದಿನ ಕೂಲಿಗೆ ಸಮ. .
ಪರಮ ಗೀತ 8 : 12 (IRVKN)
ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.
ಪರಮ ಗೀತ 8 : 13 (IRVKN)
ನಲ್ಲ ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.
ಪರಮ ಗೀತ 8 : 14 (IRVKN)
ನಲ್ಲೆ ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.
❮
❯
1
2
3
4
5
6
7
8
9
10
11
12
13
14