ತೀತನಿಗೆ 3 : 1 (IRVKN)
ಕ್ರೈಸ್ತ ವಿಶ್ವಾಸಿಗಳ ಒಳ್ಳೆ ನಡತೆ ಬೋಧನೆ * ರೋಮಾ 13:1; 1 ಪೇತ್ರ 2:13 ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,
ತೀತನಿಗೆ 3 : 2 (IRVKN)
ಯಾರನ್ನೂ ದೂಷಿಸದೆ, 1 ತಿಮೊ 3:3 ಕುತರ್ಕ ಮಾಡದೆ ‡ 2 ತಿಮೊ 2:25 ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
ತೀತನಿಗೆ 3 : 3 (IRVKN)
§ 1 ಕೊರಿ 6:11 ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ತೀತನಿಗೆ 3 : 4 (IRVKN)
ಆದರೆ ನಮ್ಮ ರಕ್ಷಕನಾದ ದೇವರ * ರೋಮಾ 2:4 ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
ತೀತನಿಗೆ 3 : 5 (IRVKN)
ರೋಮಾ 3:27 ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ‡ ಎಫೆ 5:27; ಯೋಹಾ 3:5; 1 ಕೊರಿ 6:11; 1 ಪೇತ್ರ 3:21; ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ § ರೋಮಾ 12:2 ನವೀಕರಣದ ಮೂಲಕವಾಗಿಯೂ ಆತನು * ಎಫೆ 2:4; 1 ಪೇತ್ರ 1:3 ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
ತೀತನಿಗೆ 3 : 6 (IRVKN)
(6-7)ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ತೀತ 1:2 ನಿತ್ಯಜೀವದ ನಿರೀಕ್ಷೆಗೆ ‡ ರೋಮಾ. 8:17 ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ [§ ಯೋವೇ. 2:28; ಅ. ಕೃ 2:33; 10: 45 ರೋಮಾ 5:5 ]ಸುರಿಸಿದನು.
ತೀತನಿಗೆ 3 : 7 (IRVKN)
ತೀತನಿಗೆ 3 : 8 (IRVKN)
* 1 ತಿಮೊ. 1:15 ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
ತೀತನಿಗೆ 3 : 9 (IRVKN)
ಆದರೆ ಬುದ್ಧಿಯಿಲ್ಲದ 1 ತಿಮೊ. 6:4 ತರ್ಕಗಳಿಂದಲೂ, ‡ 1 ತಿಮೊ. 1:4 ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; § 2 ತಿಮೊ 2:14 ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.
ತೀತನಿಗೆ 3 : 10 (IRVKN)
ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು [* ಮತ್ತಾ 18: 15 2 ಥೆಸ 3:15; ಯಾಕೋಬ 5:19 ]ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;
ತೀತನಿಗೆ 3 : 11 (IRVKN)
ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.
ತೀತನಿಗೆ 3 : 12 (IRVKN)
ಕಡೆ ಮಾತುಗಳು ನಾನು 2 ತಿಮೊ. 4:10 ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ‡ 2 ತಿಮೊ. 4:12 ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.
ತೀತನಿಗೆ 3 : 13 (IRVKN)
ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು § ಅ. ಕೃ 18:24 ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.
ತೀತನಿಗೆ 3 : 14 (IRVKN)
ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
ತೀತನಿಗೆ 3 : 15 (IRVKN)
ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. * ಕೊಲೊ 4:18 ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.

1 2 3 4 5 6 7 8 9 10 11 12 13 14 15