ಜೆಕರ್ಯ 1 : 1 (IRVKN)
ಯೆಹೋವನ ಕಡೆಗೆ ಹಿಂದಿರುಗಬೇಕೆಂಬ ಎಚ್ಚರಿಕೆ ದಾರ್ಯಾವೆಷನ* ದಾರ್ಯಾವೆಷನ ಅರಸನಾದ ದಾರ್ಯಾವೆಷನು ದಾರ್ಯಾವೆಷನಾದ ಹೈಸ್ಪಾಸ್ಪೆಸ್ ಆಗಿದ್ದು, ಕ್ರಿ.ಶ. 522-486 ರಲ್ಲಿ ಪರ್ಷಿಯಾವನ್ನು ಆಳಿದನು, ಪರ್ಷಿಯನ್ ಭಾಷೆಯಲ್ಲಿ ಅವನ ಹೆಸರು ದಾರಾ. ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.
ಜೆಕರ್ಯ 1 : 2 (IRVKN)
ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ.
ಜೆಕರ್ಯ 1 : 3 (IRVKN)
ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’ ” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಜೆಕರ್ಯ 1 : 5 (IRVKN)
ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ. “ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
ಜೆಕರ್ಯ 1 : 6 (IRVKN)
ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’ ” ಅಂದುಕೊಂಡರು.
ಜೆಕರ್ಯ 1 : 7 (IRVKN)
ನಾಲ್ಕು ಅಶ್ವ ಸವಾರರ ವಿಷಯವಾದ ದರ್ಶನ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,
ಜೆಕರ್ಯ 1 : 8 (IRVKN)
“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.
ಜೆಕರ್ಯ 1 : 9 (IRVKN)
ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’ ” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
ಜೆಕರ್ಯ 1 : 10 (IRVKN)
ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
ಜೆಕರ್ಯ 1 : 11 (IRVKN)
ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.
ಜೆಕರ್ಯ 1 : 12 (IRVKN)
ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
ಜೆಕರ್ಯ 1 : 13 (IRVKN)
ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.
ಜೆಕರ್ಯ 1 : 15 (IRVKN)
ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ. ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
ಜೆಕರ್ಯ 1 : 16 (IRVKN)
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಜೆಕರ್ಯ 1 : 17 (IRVKN)
ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”
ಜೆಕರ್ಯ 1 : 18 (IRVKN)
ನಾಲ್ಕು ಕೊಂಬುಗಳು ಮತ್ತು ನಾಲ್ವರು ಕಮ್ಮಾರರ ವಿಷಯವಾದ ದರ್ಶನ ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.
ಜೆಕರ್ಯ 1 : 19 (IRVKN)
ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.
ಜೆಕರ್ಯ 1 : 20 (IRVKN)
ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.
ಜೆಕರ್ಯ 1 : 21 (IRVKN)
ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡವುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21