ಜೆಕರ್ಯ 10 : 1 (IRVKN)
ಕಣಿಯವರಲ್ಲಿ ನಂಬಿಕೆ ಇಡಬಾರದು ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.
ಜೆಕರ್ಯ 10 : 2 (IRVKN)
ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.
ಜೆಕರ್ಯ 10 : 3 (IRVKN)
ಇಸ್ರಾಯೇಲಿನ ನೂತನ ಬಲ ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು* ಹೋತಗಳನ್ನುನಾಯಕರನ್ನು. ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.
ಜೆಕರ್ಯ 10 : 4 (IRVKN)
ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.
ಜೆಕರ್ಯ 10 : 5 (IRVKN)
ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.
ಜೆಕರ್ಯ 10 : 7 (IRVKN)
ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು. ಚದರಿದವರ ಹಿಂದಿರುಗುವಿಕೆ
ಜೆಕರ್ಯ 10 : 8 (IRVKN)
ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.
ಜೆಕರ್ಯ 10 : 9 (IRVKN)
ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು. ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.
ಜೆಕರ್ಯ 10 : 10 (IRVKN)
ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.
ಜೆಕರ್ಯ 10 : 11 (IRVKN)
ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.
ಜೆಕರ್ಯ 10 : 12 (IRVKN)
ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.
❮
❯
1
2
3
4
5
6
7
8
9
10
11
12