ಜೆಕರ್ಯ 14 : 1 (IRVKN)
ಯೆಹೋವನ ಬರೋಣ ಮತ್ತು ಆಳ್ವಿಕೆ
ಜೆಕರ್ಯ 14 : 2 (IRVKN)
ಆಹಾ, ಚೀಯೋನೇ, ಯೆಹೋವನು ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು. ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
ಜೆಕರ್ಯ 14 : 3 (IRVKN)
ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
ಜೆಕರ್ಯ 14 : 4 (IRVKN)
ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
ಜೆಕರ್ಯ 14 : 5 (IRVKN)
ನೀವು ಯೆಹೋವನ* ಯೆಹೋವನ ನನ್ನ. ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
ಜೆಕರ್ಯ 14 : 6 (IRVKN)
ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
ಜೆಕರ್ಯ 14 : 7 (IRVKN)
ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
ಜೆಕರ್ಯ 14 : 9 (IRVKN)
ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.
ಜೆಕರ್ಯ 14 : 10 (IRVKN)
ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು. ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.
ಜೆಕರ್ಯ 14 : 11 (IRVKN)
ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
ಜೆಕರ್ಯ 14 : 12 (IRVKN)
ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.
ಜೆಕರ್ಯ 14 : 13 (IRVKN)
ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.
ಜೆಕರ್ಯ 14 : 14 (IRVKN)
ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
ಜೆಕರ್ಯ 14 : 15 (IRVKN)
ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.
ಜೆಕರ್ಯ 14 : 16 (IRVKN)
ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
ಜೆಕರ್ಯ 14 : 17 (IRVKN)
ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.
ಜೆಕರ್ಯ 14 : 18 (IRVKN)
ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.
ಜೆಕರ್ಯ 14 : 19 (IRVKN)
ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
ಜೆಕರ್ಯ 14 : 20 (IRVKN)
ಯೆರೂಸಲೇಮಿನ ಪೂರ್ಣಪರಿಶುದ್ಧತೆ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
ಜೆಕರ್ಯ 14 : 21 (IRVKN)
ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ† ವ್ಯಾಪಾರಿಯೂ ಅಥವಾ ಕಾನಾನ್ಯನೂ. ಇರುವುದಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19
20
21