ಜೆಕರ್ಯ 2 : 1 (IRVKN)
ಅಳತೆಯ ನೂಲಿನ ವಿಷಯವಾದ ದರ್ಶನ ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.
ಜೆಕರ್ಯ 2 : 2 (IRVKN)
ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು.
ಜೆಕರ್ಯ 2 : 3 (IRVKN)
ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,
ಜೆಕರ್ಯ 2 : 4 (IRVKN)
“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.
ಜೆಕರ್ಯ 2 : 5 (IRVKN)
ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’ ” ಎಂಬುದು ಯೆಹೋವನ ನುಡಿ.
ಜೆಕರ್ಯ 2 : 6 (IRVKN)
ಸೆರೆಯಾಗಿ ಬಾಬೆಲಿನಲ್ಲಿ ಇರುವವರು ಚೀಯೋನಿಗೆ ಮರಳಿ ಬರಬೇಕೆಂಬ ಕರೆ ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
ಜೆಕರ್ಯ 2 : 7 (IRVKN)
ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
ಜೆಕರ್ಯ 2 : 8 (IRVKN)
ನಿಮ್ಮನ್ನು ತಾಕುವವನು ನನ್ನ* ನನ್ನ ಅಥವಾ ಆತನ. ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,
ಜೆಕರ್ಯ 2 : 9 (IRVKN)
“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.
ಜೆಕರ್ಯ 2 : 10 (IRVKN)
ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.
ಜೆಕರ್ಯ 2 : 11 (IRVKN)
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
ಜೆಕರ್ಯ 2 : 12 (IRVKN)
ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
ಜೆಕರ್ಯ 2 : 13 (IRVKN)
ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

1 2 3 4 5 6 7 8 9 10 11 12 13