ಜೆಕರ್ಯ 7 : 1 (IRVKN)
ಕಪಟ ಉಪವಾಸ ಸರಿಯಲ್ಲ ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
ಜೆಕರ್ಯ 7 : 2 (IRVKN)
ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
ಜೆಕರ್ಯ 7 : 3 (IRVKN)
ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದರು.
ಜೆಕರ್ಯ 7 : 4 (IRVKN)
ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
ಜೆಕರ್ಯ 7 : 5 (IRVKN)
“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
ಜೆಕರ್ಯ 7 : 6 (IRVKN)
ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
ಜೆಕರ್ಯ 7 : 7 (IRVKN)
ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ* ದಕ್ಷಿಣ ನೆಗೆವ್ ಪಟ್ಟಣಗಳು. ಪ್ರಾಂತ್ಯದಲ್ಲಿಯೂ, ಪೂರ್ವದ † ಪೂರ್ವದ ಶೆಫೆಲಾ. ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’ ”
ಜೆಕರ್ಯ 7 : 8 (IRVKN)
ಇಸ್ರಾಯೇಲಿನ ದುರ್ಗತಿ
ಜೆಕರ್ಯ 7 : 9 (IRVKN)
ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
ಜೆಕರ್ಯ 7 : 10 (IRVKN)
ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
ಜೆಕರ್ಯ 7 : 11 (IRVKN)
“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
ಜೆಕರ್ಯ 7 : 12 (IRVKN)
ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
ಜೆಕರ್ಯ 7 : 13 (IRVKN)
“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
ಜೆಕರ್ಯ 7 : 14 (IRVKN)
ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’ ”

1 2 3 4 5 6 7 8 9 10 11 12 13 14