ಚೆಫನ್ಯ 1 : 2 (IRVKN)
ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ. ಮುಂಬರಲಿರುವ ನಾಶನ
ಚೆಫನ್ಯ 1 : 3 (IRVKN)
ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು. ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.
ಚೆಫನ್ಯ 1 : 4 (IRVKN)
ಯೆಹೂದಕ್ಕೆ ದೇವರ ದಂಡನೆ ತಪ್ಪದು “ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,
ಚೆಫನ್ಯ 1 : 5 (IRVKN)
ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ* ಮಲ್ಕಾಮನ ಇದು ವಿಗ್ರಹ, ಆಮೋನ್ಯರ ದೇವತೆ. ಮೇಲೆ ಆಣೆಯಿಡುವವರನ್ನೂ,
ಚೆಫನ್ಯ 1 : 6 (IRVKN)
ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”
ಚೆಫನ್ಯ 1 : 7 (IRVKN)
ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.
ಚೆಫನ್ಯ 1 : 8 (IRVKN)
“ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.
ಚೆಫನ್ಯ 1 : 9 (IRVKN)
ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ† ಒಡೆಯನ ಮನೆಯೊಳಗೆ ಅಥವಾ ತಮ್ಮ ದೇವಸ್ಥಾನದೊಳಗೆ. ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.
ಚೆಫನ್ಯ 1 : 10 (IRVKN)
ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.
ಚೆಫನ್ಯ 1 : 11 (IRVKN)
ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.
ಚೆಫನ್ಯ 1 : 12 (IRVKN)
ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.
ಚೆಫನ್ಯ 1 : 13 (IRVKN)
ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.
ಚೆಫನ್ಯ 1 : 14 (IRVKN)
ಯೆಹೋವನ ದಿನದ ವಿವರಣೆ ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!
ಚೆಫನ್ಯ 1 : 15 (IRVKN)
ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!
ಚೆಫನ್ಯ 1 : 16 (IRVKN)
ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.
ಚೆಫನ್ಯ 1 : 17 (IRVKN)
ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!
ಚೆಫನ್ಯ 1 : 18 (IRVKN)
ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!
❮
❯
1
2
3
4
5
6
7
8
9
10
11
12
13
14
15
16
17
18