1 ಪೂರ್ವಕಾಲವೃತ್ತಾ 16 : 1 (KNV)
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
1 ಪೂರ್ವಕಾಲವೃತ್ತಾ 16 : 2 (KNV)
ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
1 ಪೂರ್ವಕಾಲವೃತ್ತಾ 16 : 3 (KNV)
ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
1 ಪೂರ್ವಕಾಲವೃತ್ತಾ 16 : 4 (KNV)
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
1 ಪೂರ್ವಕಾಲವೃತ್ತಾ 16 : 5 (KNV)
ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
1 ಪೂರ್ವಕಾಲವೃತ್ತಾ 16 : 6 (KNV)
ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
1 ಪೂರ್ವಕಾಲವೃತ್ತಾ 16 : 7 (KNV)
ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
1 ಪೂರ್ವಕಾಲವೃತ್ತಾ 16 : 8 (KNV)
ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
1 ಪೂರ್ವಕಾಲವೃತ್ತಾ 16 : 9 (KNV)
ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
1 ಪೂರ್ವಕಾಲವೃತ್ತಾ 16 : 10 (KNV)
ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
1 ಪೂರ್ವಕಾಲವೃತ್ತಾ 16 : 11 (KNV)
ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
1 ಪೂರ್ವಕಾಲವೃತ್ತಾ 16 : 12 (KNV)
ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
1 ಪೂರ್ವಕಾಲವೃತ್ತಾ 16 : 13 (KNV)
ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
1 ಪೂರ್ವಕಾಲವೃತ್ತಾ 16 : 14 (KNV)
ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
1 ಪೂರ್ವಕಾಲವೃತ್ತಾ 16 : 15 (KNV)
ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು
1 ಪೂರ್ವಕಾಲವೃತ್ತಾ 16 : 16 (KNV)
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
1 ಪೂರ್ವಕಾಲವೃತ್ತಾ 16 : 17 (KNV)
ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ
1 ಪೂರ್ವಕಾಲವೃತ್ತಾ 16 : 18 (KNV)
ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
1 ಪೂರ್ವಕಾಲವೃತ್ತಾ 16 : 19 (KNV)
ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
1 ಪೂರ್ವಕಾಲವೃತ್ತಾ 16 : 20 (KNV)
ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.
1 ಪೂರ್ವಕಾಲವೃತ್ತಾ 16 : 21 (KNV)
ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.
1 ಪೂರ್ವಕಾಲವೃತ್ತಾ 16 : 22 (KNV)
ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
1 ಪೂರ್ವಕಾಲವೃತ್ತಾ 16 : 23 (KNV)
ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
1 ಪೂರ್ವಕಾಲವೃತ್ತಾ 16 : 24 (KNV)
ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
1 ಪೂರ್ವಕಾಲವೃತ್ತಾ 16 : 25 (KNV)
ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
1 ಪೂರ್ವಕಾಲವೃತ್ತಾ 16 : 26 (KNV)
ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
1 ಪೂರ್ವಕಾಲವೃತ್ತಾ 16 : 27 (KNV)
ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
1 ಪೂರ್ವಕಾಲವೃತ್ತಾ 16 : 28 (KNV)
ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ,
1 ಪೂರ್ವಕಾಲವೃತ್ತಾ 16 : 29 (KNV)
ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
1 ಪೂರ್ವಕಾಲವೃತ್ತಾ 16 : 30 (KNV)
ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
1 ಪೂರ್ವಕಾಲವೃತ್ತಾ 16 : 31 (KNV)
ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
1 ಪೂರ್ವಕಾಲವೃತ್ತಾ 16 : 32 (KNV)
ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
1 ಪೂರ್ವಕಾಲವೃತ್ತಾ 16 : 33 (KNV)
ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
1 ಪೂರ್ವಕಾಲವೃತ್ತಾ 16 : 34 (KNV)
ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
1 ಪೂರ್ವಕಾಲವೃತ್ತಾ 16 : 35 (KNV)
ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
1 ಪೂರ್ವಕಾಲವೃತ್ತಾ 16 : 36 (KNV)
ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
1 ಪೂರ್ವಕಾಲವೃತ್ತಾ 16 : 37 (KNV)
ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
1 ಪೂರ್ವಕಾಲವೃತ್ತಾ 16 : 38 (KNV)
ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
1 ಪೂರ್ವಕಾಲವೃತ್ತಾ 16 : 39 (KNV)
ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
1 ಪೂರ್ವಕಾಲವೃತ್ತಾ 16 : 40 (KNV)
ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
1 ಪೂರ್ವಕಾಲವೃತ್ತಾ 16 : 41 (KNV)
ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
1 ಪೂರ್ವಕಾಲವೃತ್ತಾ 16 : 42 (KNV)
ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.
1 ಪೂರ್ವಕಾಲವೃತ್ತಾ 16 : 43 (KNV)
ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43

BG:

Opacity:

Color:


Size:


Font: