1 ಪೂರ್ವಕಾಲವೃತ್ತಾ 25 : 1 (KNV)
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
1 ಪೂರ್ವಕಾಲವೃತ್ತಾ 25 : 2 (KNV)
ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
1 ಪೂರ್ವಕಾಲವೃತ್ತಾ 25 : 3 (KNV)
ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
1 ಪೂರ್ವಕಾಲವೃತ್ತಾ 25 : 4 (KNV)
ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.
1 ಪೂರ್ವಕಾಲವೃತ್ತಾ 25 : 5 (KNV)
ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
1 ಪೂರ್ವಕಾಲವೃತ್ತಾ 25 : 6 (KNV)
ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
1 ಪೂರ್ವಕಾಲವೃತ್ತಾ 25 : 7 (KNV)
ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
1 ಪೂರ್ವಕಾಲವೃತ್ತಾ 25 : 8 (KNV)
ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
1 ಪೂರ್ವಕಾಲವೃತ್ತಾ 25 : 9 (KNV)
ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 10 (KNV)
ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,
1 ಪೂರ್ವಕಾಲವೃತ್ತಾ 25 : 11 (KNV)
ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 12 (KNV)
ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.
1 ಪೂರ್ವಕಾಲವೃತ್ತಾ 25 : 13 (KNV)
ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 14 (KNV)
ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 15 (KNV)
ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 16 (KNV)
ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 17 (KNV)
ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 18 (KNV)
ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 19 (KNV)
ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 20 (KNV)
ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 21 (KNV)
ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 22 (KNV)
ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 23 (KNV)
ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 24 (KNV)
ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 25 (KNV)
ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 26 (KNV)
ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ;
1 ಪೂರ್ವಕಾಲವೃತ್ತಾ 25 : 27 (KNV)
ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 28 (KNV)
ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 29 (KNV)
ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
1 ಪೂರ್ವಕಾಲವೃತ್ತಾ 25 : 30 (KNV)
ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
1 ಪೂರ್ವಕಾಲವೃತ್ತಾ 25 : 31 (KNV)
ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: