1 ಕೊರಿಂಥದವರಿಗೆ 12 : 1 (KNV)
ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
1 ಕೊರಿಂಥದವರಿಗೆ 12 : 2 (KNV)
ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
1 ಕೊರಿಂಥದವರಿಗೆ 12 : 3 (KNV)
ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
1 ಕೊರಿಂಥದವರಿಗೆ 12 : 4 (KNV)
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
1 ಕೊರಿಂಥದವರಿಗೆ 12 : 5 (KNV)
ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;
1 ಕೊರಿಂಥದವರಿಗೆ 12 : 6 (KNV)
ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
1 ಕೊರಿಂಥದವರಿಗೆ 12 : 7 (KNV)
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
1 ಕೊರಿಂಥದವರಿಗೆ 12 : 8 (KNV)
ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
1 ಕೊರಿಂಥದವರಿಗೆ 12 : 9 (KNV)
ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
1 ಕೊರಿಂಥದವರಿಗೆ 12 : 10 (KNV)
ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
1 ಕೊರಿಂಥದವರಿಗೆ 12 : 11 (KNV)
ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
1 ಕೊರಿಂಥದವರಿಗೆ 12 : 12 (KNV)
ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
1 ಕೊರಿಂಥದವರಿಗೆ 12 : 13 (KNV)
ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
1 ಕೊರಿಂಥದವರಿಗೆ 12 : 14 (KNV)
ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
1 ಕೊರಿಂಥದವರಿಗೆ 12 : 15 (KNV)
ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
1 ಕೊರಿಂಥದವರಿಗೆ 12 : 16 (KNV)
ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
1 ಕೊರಿಂಥದವರಿಗೆ 12 : 17 (KNV)
ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?
1 ಕೊರಿಂಥದವರಿಗೆ 12 : 18 (KNV)
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
1 ಕೊರಿಂಥದವರಿಗೆ 12 : 19 (KNV)
ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?
1 ಕೊರಿಂಥದವರಿಗೆ 12 : 20 (KNV)
ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.
1 ಕೊರಿಂಥದವರಿಗೆ 12 : 21 (KNV)
ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
1 ಕೊರಿಂಥದವರಿಗೆ 12 : 22 (KNV)
ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.
1 ಕೊರಿಂಥದವರಿಗೆ 12 : 23 (KNV)
ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
1 ಕೊರಿಂಥದವರಿಗೆ 12 : 24 (KNV)
ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.
1 ಕೊರಿಂಥದವರಿಗೆ 12 : 25 (KNV)
ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.
1 ಕೊರಿಂಥದವರಿಗೆ 12 : 26 (KNV)
ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
1 ಕೊರಿಂಥದವರಿಗೆ 12 : 27 (KNV)
ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
1 ಕೊರಿಂಥದವರಿಗೆ 12 : 28 (KNV)
ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
1 ಕೊರಿಂಥದವರಿಗೆ 12 : 29 (KNV)
ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
1 ಕೊರಿಂಥದವರಿಗೆ 12 : 30 (KNV)
ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
1 ಕೊರಿಂಥದವರಿಗೆ 12 : 31 (KNV)
ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: