1 ಯೋಹಾನನು 2 : 1 (KNV)
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
1 ಯೋಹಾನನು 2 : 2 (KNV)
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
1 ಯೋಹಾನನು 2 : 3 (KNV)
ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
1 ಯೋಹಾನನು 2 : 4 (KNV)
ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
1 ಯೋಹಾನನು 2 : 5 (KNV)
ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
1 ಯೋಹಾನನು 2 : 6 (KNV)
ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
1 ಯೋಹಾನನು 2 : 7 (KNV)
ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.
1 ಯೋಹಾನನು 2 : 8 (KNV)
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
1 ಯೋಹಾನನು 2 : 9 (KNV)
ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
1 ಯೋಹಾನನು 2 : 10 (KNV)
ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
1 ಯೋಹಾನನು 2 : 11 (KNV)
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
1 ಯೋಹಾನನು 2 : 12 (KNV)
ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
1 ಯೋಹಾನನು 2 : 13 (KNV)
ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
1 ಯೋಹಾನನು 2 : 14 (KNV)
ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
1 ಯೋಹಾನನು 2 : 15 (KNV)
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
1 ಯೋಹಾನನು 2 : 16 (KNV)
ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
1 ಯೋಹಾನನು 2 : 17 (KNV)
ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
1 ಯೋಹಾನನು 2 : 18 (KNV)
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
1 ಯೋಹಾನನು 2 : 19 (KNV)
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
1 ಯೋಹಾನನು 2 : 20 (KNV)
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
1 ಯೋಹಾನನು 2 : 21 (KNV)
ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
1 ಯೋಹಾನನು 2 : 22 (KNV)
ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
1 ಯೋಹಾನನು 2 : 23 (KNV)
ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
1 ಯೋಹಾನನು 2 : 24 (KNV)
ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
1 ಯೋಹಾನನು 2 : 25 (KNV)
ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
1 ಯೋಹಾನನು 2 : 26 (KNV)
ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
1 ಯೋಹಾನನು 2 : 27 (KNV)
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
1 ಯೋಹಾನನು 2 : 28 (KNV)
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.
1 ಯೋಹಾನನು 2 : 29 (KNV)
ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29