1 ಅರಸುಗಳು 10 : 1 (KNV)
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
1 ಅರಸುಗಳು 10 : 2 (KNV)
ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
1 ಅರಸುಗಳು 10 : 3 (KNV)
ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.
1 ಅರಸುಗಳು 10 : 4 (KNV)
ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ
1 ಅರಸುಗಳು 10 : 5 (KNV)
ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
1 ಅರಸುಗಳು 10 : 6 (KNV)
ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.
1 ಅರಸುಗಳು 10 : 7 (KNV)
ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
1 ಅರಸುಗಳು 10 : 8 (KNV)
ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
1 ಅರಸುಗಳು 10 : 9 (KNV)
ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
1 ಅರಸುಗಳು 10 : 10 (KNV)
ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
1 ಅರಸುಗಳು 10 : 11 (KNV)
ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
1 ಅರಸುಗಳು 10 : 12 (KNV)
ಅರಸನು ಅಲ್ಮುಗ್‌ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್‌ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
1 ಅರಸುಗಳು 10 : 13 (KNV)
ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
1 ಅರಸುಗಳು 10 : 14 (KNV)
ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
1 ಅರಸುಗಳು 10 : 15 (KNV)
ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
1 ಅರಸುಗಳು 10 : 16 (KNV)
ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.
1 ಅರಸುಗಳು 10 : 17 (KNV)
ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
1 ಅರಸುಗಳು 10 : 18 (KNV)
ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.
1 ಅರಸುಗಳು 10 : 19 (KNV)
ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
1 ಅರಸುಗಳು 10 : 20 (KNV)
ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.
1 ಅರಸುಗಳು 10 : 21 (KNV)
ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
1 ಅರಸುಗಳು 10 : 22 (KNV)
ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
1 ಅರಸುಗಳು 10 : 23 (KNV)
ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
1 ಅರಸುಗಳು 10 : 24 (KNV)
ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
1 ಅರಸುಗಳು 10 : 25 (KNV)
ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
1 ಅರಸುಗಳು 10 : 26 (KNV)
ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
1 ಅರಸುಗಳು 10 : 27 (KNV)
ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
1 ಅರಸುಗಳು 10 : 28 (KNV)
ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
1 ಅರಸುಗಳು 10 : 29 (KNV)
ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: