1 ಅರಸುಗಳು 9 : 1 (KNV)
ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,
1 ಅರಸುಗಳು 9 : 2 (KNV)
ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
1 ಅರಸುಗಳು 9 : 3 (KNV)
ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
1 ಅರಸುಗಳು 9 : 4 (KNV)
ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
1 ಅರಸುಗಳು 9 : 5 (KNV)
ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
1 ಅರಸುಗಳು 9 : 6 (KNV)
ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
1 ಅರಸುಗಳು 9 : 7 (KNV)
ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
1 ಅರಸುಗಳು 9 : 8 (KNV)
ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
1 ಅರಸುಗಳು 9 : 9 (KNV)
ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
1 ಅರಸುಗಳು 9 : 10 (KNV)
ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ
1 ಅರಸುಗಳು 9 : 11 (KNV)
ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
1 ಅರಸುಗಳು 9 : 12 (KNV)
ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.
1 ಅರಸುಗಳು 9 : 13 (KNV)
ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
1 ಅರಸುಗಳು 9 : 14 (KNV)
ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
1 ಅರಸುಗಳು 9 : 15 (KNV)
ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
1 ಅರಸುಗಳು 9 : 16 (KNV)
ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
1 ಅರಸುಗಳು 9 : 17 (KNV)
ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
1 ಅರಸುಗಳು 9 : 18 (KNV)
ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ
1 ಅರಸುಗಳು 9 : 19 (KNV)
ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
1 ಅರಸುಗಳು 9 : 20 (KNV)
ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
1 ಅರಸುಗಳು 9 : 21 (KNV)
ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
1 ಅರಸುಗಳು 9 : 22 (KNV)
ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
1 ಅರಸುಗಳು 9 : 23 (KNV)
ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
1 ಅರಸುಗಳು 9 : 24 (KNV)
ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
1 ಅರಸುಗಳು 9 : 25 (KNV)
ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.
1 ಅರಸುಗಳು 9 : 26 (KNV)
ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
1 ಅರಸುಗಳು 9 : 27 (KNV)
ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.
1 ಅರಸುಗಳು 9 : 28 (KNV)
ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
❮
❯