1 ಪೇತ್ರನು 2 : 1 (KNV)
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
1 ಪೇತ್ರನು 2 : 2 (KNV)
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
1 ಪೇತ್ರನು 2 : 3 (KNV)
ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
1 ಪೇತ್ರನು 2 : 4 (KNV)
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
1 ಪೇತ್ರನು 2 : 5 (KNV)
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
1 ಪೇತ್ರನು 2 : 6 (KNV)
ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
1 ಪೇತ್ರನು 2 : 7 (KNV)
ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
1 ಪೇತ್ರನು 2 : 8 (KNV)
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
1 ಪೇತ್ರನು 2 : 9 (KNV)
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
1 ಪೇತ್ರನು 2 : 10 (KNV)
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
1 ಪೇತ್ರನು 2 : 11 (KNV)
ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 ಪೇತ್ರನು 2 : 12 (KNV)
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
1 ಪೇತ್ರನು 2 : 13 (KNV)
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
1 ಪೇತ್ರನು 2 : 14 (KNV)
ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
1 ಪೇತ್ರನು 2 : 15 (KNV)
ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
1 ಪೇತ್ರನು 2 : 16 (KNV)
ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
1 ಪೇತ್ರನು 2 : 17 (KNV)
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
1 ಪೇತ್ರನು 2 : 18 (KNV)
ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
1 ಪೇತ್ರನು 2 : 19 (KNV)
ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
1 ಪೇತ್ರನು 2 : 20 (KNV)
ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
1 ಪೇತ್ರನು 2 : 21 (KNV)
ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
1 ಪೇತ್ರನು 2 : 22 (KNV)
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
1 ಪೇತ್ರನು 2 : 23 (KNV)
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
1 ಪೇತ್ರನು 2 : 24 (KNV)
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.
1 ಪೇತ್ರನು 2 : 25 (KNV)
ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25