1 ಪೇತ್ರನು 5 : 1 (KNV)
ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
1 ಪೇತ್ರನು 5 : 2 (KNV)
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
1 ಪೇತ್ರನು 5 : 3 (KNV)
ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
1 ಪೇತ್ರನು 5 : 4 (KNV)
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
1 ಪೇತ್ರನು 5 : 5 (KNV)
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
1 ಪೇತ್ರನು 5 : 6 (KNV)
ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
1 ಪೇತ್ರನು 5 : 7 (KNV)
ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
1 ಪೇತ್ರನು 5 : 8 (KNV)
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
1 ಪೇತ್ರನು 5 : 9 (KNV)
ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
1 ಪೇತ್ರನು 5 : 10 (KNV)
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
1 ಪೇತ್ರನು 5 : 11 (KNV)
ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
1 ಪೇತ್ರನು 5 : 12 (KNV)
ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
1 ಪೇತ್ರನು 5 : 13 (KNV)
ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.
1 ಪೇತ್ರನು 5 : 14 (KNV)
ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.

1 2 3 4 5 6 7 8 9 10 11 12 13 14