1 ಸಮುವೇಲನು 10 : 1 (KNV)
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
1 ಸಮುವೇಲನು 10 : 2 (KNV)
ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
1 ಸಮುವೇಲನು 10 : 3 (KNV)
ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
1 ಸಮುವೇಲನು 10 : 4 (KNV)
ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
1 ಸಮುವೇಲನು 10 : 5 (KNV)
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
1 ಸಮುವೇಲನು 10 : 6 (KNV)
ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
1 ಸಮುವೇಲನು 10 : 7 (KNV)
ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
1 ಸಮುವೇಲನು 10 : 8 (KNV)
ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
1 ಸಮುವೇಲನು 10 : 9 (KNV)
ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.
1 ಸಮುವೇಲನು 10 : 10 (KNV)
ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
1 ಸಮುವೇಲನು 10 : 11 (KNV)
ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.
1 ಸಮುವೇಲನು 10 : 12 (KNV)
ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು.
1 ಸಮುವೇಲನು 10 : 13 (KNV)
ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.
1 ಸಮುವೇಲನು 10 : 14 (KNV)
ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
1 ಸಮುವೇಲನು 10 : 15 (KNV)
ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.
1 ಸಮುವೇಲನು 10 : 16 (KNV)
ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
1 ಸಮುವೇಲನು 10 : 17 (KNV)
ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
1 ಸಮುವೇಲನು 10 : 18 (KNV)
ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
1 ಸಮುವೇಲನು 10 : 19 (KNV)
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
1 ಸಮುವೇಲನು 10 : 20 (KNV)
ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
1 ಸಮುವೇಲನು 10 : 21 (KNV)
ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
1 ಸಮುವೇಲನು 10 : 22 (KNV)
ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
1 ಸಮುವೇಲನು 10 : 23 (KNV)
ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
1 ಸಮುವೇಲನು 10 : 24 (KNV)
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
1 ಸಮುವೇಲನು 10 : 25 (KNV)
ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
1 ಸಮುವೇಲನು 10 : 26 (KNV)
ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.
1 ಸಮುವೇಲನು 10 : 27 (KNV)
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27

BG:

Opacity:

Color:


Size:


Font: