1 ಸಮುವೇಲನು 17 : 1 (KNV)
ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
1 ಸಮುವೇಲನು 17 : 2 (KNV)
ಹಾಗೆಯೇ ಸೌಲನೂ ಇಸ್ರಾಯೇಲ್ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
1 ಸಮುವೇಲನು 17 : 3 (KNV)
ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿ ಯಲ್ಲಿಯೂ ಇಸ್ರಾಯೇಲ್ಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು, ಅವರ ಮಧ್ಯದಲ್ಲಿ ತಗ್ಗು ಇತ್ತು.
1 ಸಮುವೇಲನು 17 : 4 (KNV)
ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
1 ಸಮುವೇಲನು 17 : 5 (KNV)
ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು.
1 ಸಮುವೇಲನು 17 : 6 (KNV)
ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು.
1 ಸಮುವೇಲನು 17 : 7 (KNV)
ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
1 ಸಮುವೇಲನು 17 : 8 (KNV)
ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ.
1 ಸಮುವೇಲನು 17 : 9 (KNV)
ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು.
1 ಸಮುವೇಲನು 17 : 10 (KNV)
ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
1 ಸಮುವೇಲನು 17 : 11 (KNV)
ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು.
1 ಸಮುವೇಲನು 17 : 12 (KNV)
ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
1 ಸಮುವೇಲನು 17 : 13 (KNV)
ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
1 ಸಮುವೇಲನು 17 : 14 (KNV)
ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.
1 ಸಮುವೇಲನು 17 : 15 (KNV)
ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.
1 ಸಮುವೇಲನು 17 : 16 (KNV)
ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
1 ಸಮುವೇಲನು 17 : 17 (KNV)
ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು.
1 ಸಮುವೇಲನು 17 : 18 (KNV)
ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
1 ಸಮುವೇಲನು 17 : 19 (KNV)
ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.
1 ಸಮುವೇಲನು 17 : 20 (KNV)
ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
1 ಸಮುವೇಲನು 17 : 21 (KNV)
ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
1 ಸಮುವೇಲನು 17 : 22 (KNV)
ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
1 ಸಮುವೇಲನು 17 : 23 (KNV)
ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು.
1 ಸಮುವೇಲನು 17 : 24 (KNV)
ಇಸ್ರಾಯೇಲ್ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
1 ಸಮುವೇಲನು 17 : 25 (KNV)
ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
1 ಸಮುವೇಲನು 17 : 26 (KNV)
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
1 ಸಮುವೇಲನು 17 : 27 (KNV)
ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
1 ಸಮುವೇಲನು 17 : 28 (KNV)
ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
1 ಸಮುವೇಲನು 17 : 29 (KNV)
ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
1 ಸಮುವೇಲನು 17 : 30 (KNV)
ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು.
1 ಸಮುವೇಲನು 17 : 31 (KNV)
ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
1 ಸಮುವೇಲನು 17 : 32 (KNV)
ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
1 ಸಮುವೇಲನು 17 : 33 (KNV)
ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
1 ಸಮುವೇಲನು 17 : 34 (KNV)
ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
1 ಸಮುವೇಲನು 17 : 35 (KNV)
ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
1 ಸಮುವೇಲನು 17 : 36 (KNV)
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
1 ಸಮುವೇಲನು 17 : 37 (KNV)
ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
1 ಸಮುವೇಲನು 17 : 38 (KNV)
ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು.
1 ಸಮುವೇಲನು 17 : 39 (KNV)
ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
1 ಸಮುವೇಲನು 17 : 40 (KNV)
ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
1 ಸಮುವೇಲನು 17 : 41 (KNV)
ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
1 ಸಮುವೇಲನು 17 : 42 (KNV)
ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
1 ಸಮುವೇಲನು 17 : 43 (KNV)
ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
1 ಸಮುವೇಲನು 17 : 44 (KNV)
ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
1 ಸಮುವೇಲನು 17 : 45 (KNV)
ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
1 ಸಮುವೇಲನು 17 : 46 (KNV)
ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
1 ಸಮುವೇಲನು 17 : 47 (KNV)
ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
1 ಸಮುವೇಲನು 17 : 48 (KNV)
ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
1 ಸಮುವೇಲನು 17 : 49 (KNV)
ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
1 ಸಮುವೇಲನು 17 : 50 (KNV)
ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
1 ಸಮುವೇಲನು 17 : 51 (KNV)
ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
1 ಸಮುವೇಲನು 17 : 52 (KNV)
ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
1 ಸಮುವೇಲನು 17 : 53 (KNV)
ಇಸ್ರಾಯೇಲ್ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು.
1 ಸಮುವೇಲನು 17 : 54 (KNV)
ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
1 ಸಮುವೇಲನು 17 : 55 (KNV)
ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
1 ಸಮುವೇಲನು 17 : 56 (KNV)
ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
1 ಸಮುವೇಲನು 17 : 57 (KNV)
ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.
1 ಸಮುವೇಲನು 17 : 58 (KNV)
ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
❮
❯