1 ಸಮುವೇಲನು 24 : 1 (KNV)
ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.
1 ಸಮುವೇಲನು 24 : 2 (KNV)
ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
1 ಸಮುವೇಲನು 24 : 3 (KNV)
ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
1 ಸಮುವೇಲನು 24 : 4 (KNV)
ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
1 ಸಮುವೇಲನು 24 : 5 (KNV)
ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
1 ಸಮುವೇಲನು 24 : 6 (KNV)
ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
1 ಸಮುವೇಲನು 24 : 7 (KNV)
ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
1 ಸಮುವೇಲನು 24 : 8 (KNV)
ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
1 ಸಮುವೇಲನು 24 : 9 (KNV)
ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
1 ಸಮುವೇಲನು 24 : 10 (KNV)
ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
1 ಸಮುವೇಲನು 24 : 11 (KNV)
ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
1 ಸಮುವೇಲನು 24 : 12 (KNV)
ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
1 ಸಮುವೇಲನು 24 : 13 (KNV)
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
1 ಸಮುವೇಲನು 24 : 14 (KNV)
ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
1 ಸಮುವೇಲನು 24 : 15 (KNV)
ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
1 ಸಮುವೇಲನು 24 : 16 (KNV)
ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
1 ಸಮುವೇಲನು 24 : 17 (KNV)
ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
1 ಸಮುವೇಲನು 24 : 18 (KNV)
ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
1 ಸಮುವೇಲನು 24 : 19 (KNV)
ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
1 ಸಮುವೇಲನು 24 : 20 (KNV)
ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
1 ಸಮುವೇಲನು 24 : 21 (KNV)
ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.
1 ಸಮುವೇಲನು 24 : 22 (KNV)
ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: