1 ಸಮುವೇಲನು 4 : 1 (KNV)
ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
1 ಸಮುವೇಲನು 4 : 2 (KNV)
ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
1 ಸಮುವೇಲನು 4 : 3 (KNV)
ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
1 ಸಮುವೇಲನು 4 : 4 (KNV)
ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
1 ಸಮುವೇಲನು 4 : 5 (KNV)
ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
1 ಸಮುವೇಲನು 4 : 6 (KNV)
ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.
1 ಸಮುವೇಲನು 4 : 7 (KNV)
ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
1 ಸಮುವೇಲನು 4 : 8 (KNV)
ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
1 ಸಮುವೇಲನು 4 : 9 (KNV)
ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
1 ಸಮುವೇಲನು 4 : 10 (KNV)
ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
1 ಸಮುವೇಲನು 4 : 11 (KNV)
ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
1 ಸಮುವೇಲನು 4 : 12 (KNV)
ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
1 ಸಮುವೇಲನು 4 : 13 (KNV)
ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
1 ಸಮುವೇಲನು 4 : 14 (KNV)
ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
1 ಸಮುವೇಲನು 4 : 15 (KNV)
ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
1 ಸಮುವೇಲನು 4 : 16 (KNV)
ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
1 ಸಮುವೇಲನು 4 : 17 (KNV)
ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
1 ಸಮುವೇಲನು 4 : 18 (KNV)
ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
1 ಸಮುವೇಲನು 4 : 19 (KNV)
ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
1 ಸಮುವೇಲನು 4 : 20 (KNV)
ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
1 ಸಮುವೇಲನು 4 : 21 (KNV)
ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.
1 ಸಮುವೇಲನು 4 : 22 (KNV)
ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
❮
❯