1 ಥೆಸಲೊನೀಕದವರಿಗೆ 2 : 1 (KNV)
ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
1 ಥೆಸಲೊನೀಕದವರಿಗೆ 2 : 2 (KNV)
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
1 ಥೆಸಲೊನೀಕದವರಿಗೆ 2 : 3 (KNV)
ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
1 ಥೆಸಲೊನೀಕದವರಿಗೆ 2 : 4 (KNV)
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
1 ಥೆಸಲೊನೀಕದವರಿಗೆ 2 : 5 (KNV)
ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
1 ಥೆಸಲೊನೀಕದವರಿಗೆ 2 : 6 (KNV)
ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
1 ಥೆಸಲೊನೀಕದವರಿಗೆ 2 : 7 (KNV)
ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
1 ಥೆಸಲೊನೀಕದವರಿಗೆ 2 : 8 (KNV)
ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
1 ಥೆಸಲೊನೀಕದವರಿಗೆ 2 : 9 (KNV)
ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
1 ಥೆಸಲೊನೀಕದವರಿಗೆ 2 : 10 (KNV)
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
1 ಥೆಸಲೊನೀಕದವರಿಗೆ 2 : 11 (KNV)
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
1 ಥೆಸಲೊನೀಕದವರಿಗೆ 2 : 12 (KNV)
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
1 ಥೆಸಲೊನೀಕದವರಿಗೆ 2 : 13 (KNV)
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
1 ಥೆಸಲೊನೀಕದವರಿಗೆ 2 : 14 (KNV)
ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
1 ಥೆಸಲೊನೀಕದವರಿಗೆ 2 : 15 (KNV)
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
1 ಥೆಸಲೊನೀಕದವರಿಗೆ 2 : 16 (KNV)
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
1 ಥೆಸಲೊನೀಕದವರಿಗೆ 2 : 17 (KNV)
ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
1 ಥೆಸಲೊನೀಕದವರಿಗೆ 2 : 18 (KNV)
ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
1 ಥೆಸಲೊನೀಕದವರಿಗೆ 2 : 19 (KNV)
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?
1 ಥೆಸಲೊನೀಕದವರಿಗೆ 2 : 20 (KNV)
ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.

1 2 3 4 5 6 7 8 9 10 11 12 13 14 15 16 17 18 19 20