1 ಥೆಸಲೊನೀಕದವರಿಗೆ 3 : 1 (KNV)
ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
1 ಥೆಸಲೊನೀಕದವರಿಗೆ 3 : 2 (KNV)
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
1 ಥೆಸಲೊನೀಕದವರಿಗೆ 3 : 3 (KNV)
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
1 ಥೆಸಲೊನೀಕದವರಿಗೆ 3 : 4 (KNV)
ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
1 ಥೆಸಲೊನೀಕದವರಿಗೆ 3 : 5 (KNV)
ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
1 ಥೆಸಲೊನೀಕದವರಿಗೆ 3 : 6 (KNV)
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
1 ಥೆಸಲೊನೀಕದವರಿಗೆ 3 : 7 (KNV)
ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
1 ಥೆಸಲೊನೀಕದವರಿಗೆ 3 : 8 (KNV)
ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
1 ಥೆಸಲೊನೀಕದವರಿಗೆ 3 : 9 (KNV)
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
1 ಥೆಸಲೊನೀಕದವರಿಗೆ 3 : 10 (KNV)
ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
1 ಥೆಸಲೊನೀಕದವರಿಗೆ 3 : 11 (KNV)
ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
1 ಥೆಸಲೊನೀಕದವರಿಗೆ 3 : 12 (KNV)
ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.
1 ಥೆಸಲೊನೀಕದವರಿಗೆ 3 : 13 (KNV)
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
❮
❯