2 ಪೂರ್ವಕಾಲವೃತ್ತಾ 14 : 1 (KNV)
ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
2 ಪೂರ್ವಕಾಲವೃತ್ತಾ 14 : 2 (KNV)
ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
2 ಪೂರ್ವಕಾಲವೃತ್ತಾ 14 : 3 (KNV)
ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
2 ಪೂರ್ವಕಾಲವೃತ್ತಾ 14 : 4 (KNV)
ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
2 ಪೂರ್ವಕಾಲವೃತ್ತಾ 14 : 5 (KNV)
ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
2 ಪೂರ್ವಕಾಲವೃತ್ತಾ 14 : 6 (KNV)
ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
2 ಪೂರ್ವಕಾಲವೃತ್ತಾ 14 : 7 (KNV)
ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
2 ಪೂರ್ವಕಾಲವೃತ್ತಾ 14 : 8 (KNV)
ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
2 ಪೂರ್ವಕಾಲವೃತ್ತಾ 14 : 9 (KNV)
ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
2 ಪೂರ್ವಕಾಲವೃತ್ತಾ 14 : 10 (KNV)
ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
2 ಪೂರ್ವಕಾಲವೃತ್ತಾ 14 : 11 (KNV)
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
2 ಪೂರ್ವಕಾಲವೃತ್ತಾ 14 : 12 (KNV)
ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
2 ಪೂರ್ವಕಾಲವೃತ್ತಾ 14 : 13 (KNV)
ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
2 ಪೂರ್ವಕಾಲವೃತ್ತಾ 14 : 14 (KNV)
ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.
2 ಪೂರ್ವಕಾಲವೃತ್ತಾ 14 : 15 (KNV)
ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.

1 2 3 4 5 6 7 8 9 10 11 12 13 14 15

BG:

Opacity:

Color:


Size:


Font: