2 ಪೂರ್ವಕಾಲವೃತ್ತಾ 32 : 1 (KNV)
ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
2 ಪೂರ್ವಕಾಲವೃತ್ತಾ 32 : 2 (KNV)
ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ
2 ಪೂರ್ವಕಾಲವೃತ್ತಾ 32 : 3 (KNV)
ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
2 ಪೂರ್ವಕಾಲವೃತ್ತಾ 32 : 4 (KNV)
ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
2 ಪೂರ್ವಕಾಲವೃತ್ತಾ 32 : 5 (KNV)
ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
2 ಪೂರ್ವಕಾಲವೃತ್ತಾ 32 : 6 (KNV)
ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
2 ಪೂರ್ವಕಾಲವೃತ್ತಾ 32 : 7 (KNV)
ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
2 ಪೂರ್ವಕಾಲವೃತ್ತಾ 32 : 8 (KNV)
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
2 ಪೂರ್ವಕಾಲವೃತ್ತಾ 32 : 9 (KNV)
ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
2 ಪೂರ್ವಕಾಲವೃತ್ತಾ 32 : 10 (KNV)
ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
2 ಪೂರ್ವಕಾಲವೃತ್ತಾ 32 : 11 (KNV)
ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
2 ಪೂರ್ವಕಾಲವೃತ್ತಾ 32 : 12 (KNV)
ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
2 ಪೂರ್ವಕಾಲವೃತ್ತಾ 32 : 13 (KNV)
ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
2 ಪೂರ್ವಕಾಲವೃತ್ತಾ 32 : 14 (KNV)
ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
2 ಪೂರ್ವಕಾಲವೃತ್ತಾ 32 : 15 (KNV)
ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
2 ಪೂರ್ವಕಾಲವೃತ್ತಾ 32 : 16 (KNV)
ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
2 ಪೂರ್ವಕಾಲವೃತ್ತಾ 32 : 17 (KNV)
ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
2 ಪೂರ್ವಕಾಲವೃತ್ತಾ 32 : 18 (KNV)
ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
2 ಪೂರ್ವಕಾಲವೃತ್ತಾ 32 : 19 (KNV)
ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
2 ಪೂರ್ವಕಾಲವೃತ್ತಾ 32 : 20 (KNV)
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
2 ಪೂರ್ವಕಾಲವೃತ್ತಾ 32 : 21 (KNV)
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
2 ಪೂರ್ವಕಾಲವೃತ್ತಾ 32 : 22 (KNV)
ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
2 ಪೂರ್ವಕಾಲವೃತ್ತಾ 32 : 23 (KNV)
ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
2 ಪೂರ್ವಕಾಲವೃತ್ತಾ 32 : 24 (KNV)
ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
2 ಪೂರ್ವಕಾಲವೃತ್ತಾ 32 : 25 (KNV)
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
2 ಪೂರ್ವಕಾಲವೃತ್ತಾ 32 : 26 (KNV)
ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
2 ಪೂರ್ವಕಾಲವೃತ್ತಾ 32 : 27 (KNV)
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
2 ಪೂರ್ವಕಾಲವೃತ್ತಾ 32 : 28 (KNV)
ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
2 ಪೂರ್ವಕಾಲವೃತ್ತಾ 32 : 29 (KNV)
ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
2 ಪೂರ್ವಕಾಲವೃತ್ತಾ 32 : 30 (KNV)
ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
2 ಪೂರ್ವಕಾಲವೃತ್ತಾ 32 : 31 (KNV)
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
2 ಪೂರ್ವಕಾಲವೃತ್ತಾ 32 : 32 (KNV)
ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
2 ಪೂರ್ವಕಾಲವೃತ್ತಾ 32 : 33 (KNV)
ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: