2 ಕೊರಿಂಥದವರಿಗೆ 10 : 1 (KNV)
ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
2 ಕೊರಿಂಥದವರಿಗೆ 10 : 2 (KNV)
ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
2 ಕೊರಿಂಥದವರಿಗೆ 10 : 3 (KNV)
ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
2 ಕೊರಿಂಥದವರಿಗೆ 10 : 4 (KNV)
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
2 ಕೊರಿಂಥದವರಿಗೆ 10 : 5 (KNV)
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
2 ಕೊರಿಂಥದವರಿಗೆ 10 : 6 (KNV)
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
2 ಕೊರಿಂಥದವರಿಗೆ 10 : 7 (KNV)
ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
2 ಕೊರಿಂಥದವರಿಗೆ 10 : 8 (KNV)
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
2 ಕೊರಿಂಥದವರಿಗೆ 10 : 9 (KNV)
ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.
2 ಕೊರಿಂಥದವರಿಗೆ 10 : 10 (KNV)
ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
2 ಕೊರಿಂಥದವರಿಗೆ 10 : 11 (KNV)
ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
2 ಕೊರಿಂಥದವರಿಗೆ 10 : 12 (KNV)
ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
2 ಕೊರಿಂಥದವರಿಗೆ 10 : 13 (KNV)
ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.
2 ಕೊರಿಂಥದವರಿಗೆ 10 : 14 (KNV)
ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ.
2 ಕೊರಿಂಥದವರಿಗೆ 10 : 15 (KNV)
ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
2 ಕೊರಿಂಥದವರಿಗೆ 10 : 16 (KNV)
ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
2 ಕೊರಿಂಥದವರಿಗೆ 10 : 17 (KNV)
ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.
2 ಕೊರಿಂಥದವರಿಗೆ 10 : 18 (KNV)
ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.

1 2 3 4 5 6 7 8 9 10 11 12 13 14 15 16 17 18