2 ಕೊರಿಂಥದವರಿಗೆ 13 : 1 (KNV)
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
2 ಕೊರಿಂಥದವರಿಗೆ 13 : 2 (KNV)
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
2 ಕೊರಿಂಥದವರಿಗೆ 13 : 3 (KNV)
ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
2 ಕೊರಿಂಥದವರಿಗೆ 13 : 4 (KNV)
ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
2 ಕೊರಿಂಥದವರಿಗೆ 13 : 5 (KNV)
ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
2 ಕೊರಿಂಥದವರಿಗೆ 13 : 6 (KNV)
ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.
2 ಕೊರಿಂಥದವರಿಗೆ 13 : 7 (KNV)
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
2 ಕೊರಿಂಥದವರಿಗೆ 13 : 8 (KNV)
ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.
2 ಕೊರಿಂಥದವರಿಗೆ 13 : 9 (KNV)
ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
2 ಕೊರಿಂಥದವರಿಗೆ 13 : 10 (KNV)
ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
2 ಕೊರಿಂಥದವರಿಗೆ 13 : 11 (KNV)
ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
2 ಕೊರಿಂಥದವರಿಗೆ 13 : 12 (KNV)
ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
2 ಕೊರಿಂಥದವರಿಗೆ 13 : 13 (KNV)
ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
2 ಕೊರಿಂಥದವರಿಗೆ 13 : 14 (KNV)
ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.

1 2 3 4 5 6 7 8 9 10 11 12 13 14