2 ಅರಸುಗಳು 22 : 1 (KNV)
ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು.
2 ಅರಸುಗಳು 22 : 2 (KNV)
ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
2 ಅರಸುಗಳು 22 : 3 (KNV)
ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--
2 ಅರಸುಗಳು 22 : 4 (KNV)
ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
2 ಅರಸುಗಳು 22 : 5 (KNV)
ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.
2 ಅರಸುಗಳು 22 : 6 (KNV)
ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
2 ಅರಸುಗಳು 22 : 7 (KNV)
ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
2 ಅರಸುಗಳು 22 : 8 (KNV)
ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
2 ಅರಸುಗಳು 22 : 9 (KNV)
ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
2 ಅರಸುಗಳು 22 : 10 (KNV)
ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
2 ಅರಸುಗಳು 22 : 11 (KNV)
ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
2 ಅರಸುಗಳು 22 : 12 (KNV)
ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
2 ಅರಸುಗಳು 22 : 13 (KNV)
ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
2 ಅರಸುಗಳು 22 : 14 (KNV)
ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
2 ಅರಸುಗಳು 22 : 15 (KNV)
ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು
2 ಅರಸುಗಳು 22 : 16 (KNV)
ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
2 ಅರಸುಗಳು 22 : 17 (KNV)
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
2 ಅರಸುಗಳು 22 : 18 (KNV)
ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
2 ಅರಸುಗಳು 22 : 19 (KNV)
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.
2 ಅರಸುಗಳು 22 : 20 (KNV)
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.

1 2 3 4 5 6 7 8 9 10 11 12 13 14 15 16 17 18 19 20