2 ಪೇತ್ರನು 2 : 1 (KNV)
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
2 ಪೇತ್ರನು 2 : 2 (KNV)
ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
2 ಪೇತ್ರನು 2 : 3 (KNV)
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
2 ಪೇತ್ರನು 2 : 4 (KNV)
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
2 ಪೇತ್ರನು 2 : 5 (KNV)
ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
2 ಪೇತ್ರನು 2 : 6 (KNV)
ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
2 ಪೇತ್ರನು 2 : 7 (KNV)
ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
2 ಪೇತ್ರನು 2 : 8 (KNV)
ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
2 ಪೇತ್ರನು 2 : 9 (KNV)
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
2 ಪೇತ್ರನು 2 : 10 (KNV)
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
2 ಪೇತ್ರನು 2 : 11 (KNV)
ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
2 ಪೇತ್ರನು 2 : 12 (KNV)
ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
2 ಪೇತ್ರನು 2 : 13 (KNV)
ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
2 ಪೇತ್ರನು 2 : 14 (KNV)
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
2 ಪೇತ್ರನು 2 : 15 (KNV)
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
2 ಪೇತ್ರನು 2 : 16 (KNV)
ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
2 ಪೇತ್ರನು 2 : 17 (KNV)
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
2 ಪೇತ್ರನು 2 : 18 (KNV)
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
2 ಪೇತ್ರನು 2 : 19 (KNV)
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
2 ಪೇತ್ರನು 2 : 20 (KNV)
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
2 ಪೇತ್ರನು 2 : 21 (KNV)
ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.
2 ಪೇತ್ರನು 2 : 22 (KNV)
ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
❮
❯