2 ಸಮುವೇಲನು 18 : 1 (KNV)
ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.
2 ಸಮುವೇಲನು 18 : 2 (KNV)
ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
2 ಸಮುವೇಲನು 18 : 3 (KNV)
ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
2 ಸಮುವೇಲನು 18 : 4 (KNV)
ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
2 ಸಮುವೇಲನು 18 : 5 (KNV)
ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
2 ಸಮುವೇಲನು 18 : 6 (KNV)
ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.
2 ಸಮುವೇಲನು 18 : 7 (KNV)
ಯುದ್ಧವು ಎಫ್ರಾ ಯಾಮ್‌ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
2 ಸಮುವೇಲನು 18 : 8 (KNV)
ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
2 ಸಮುವೇಲನು 18 : 9 (KNV)
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
2 ಸಮುವೇಲನು 18 : 10 (KNV)
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
2 ಸಮುವೇಲನು 18 : 11 (KNV)
ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್‌ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
2 ಸಮುವೇಲನು 18 : 12 (KNV)
ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್‌ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
2 ಸಮುವೇಲನು 18 : 13 (KNV)
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
2 ಸಮುವೇಲನು 18 : 14 (KNV)
ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
2 ಸಮುವೇಲನು 18 : 15 (KNV)
ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
2 ಸಮುವೇಲನು 18 : 16 (KNV)
ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
2 ಸಮುವೇಲನು 18 : 17 (KNV)
ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
2 ಸಮುವೇಲನು 18 : 18 (KNV)
ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
2 ಸಮುವೇಲನು 18 : 19 (KNV)
ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
2 ಸಮುವೇಲನು 18 : 20 (KNV)
ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
2 ಸಮುವೇಲನು 18 : 21 (KNV)
ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.
2 ಸಮುವೇಲನು 18 : 22 (KNV)
ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
2 ಸಮುವೇಲನು 18 : 23 (KNV)
ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
2 ಸಮುವೇಲನು 18 : 24 (KNV)
ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
2 ಸಮುವೇಲನು 18 : 25 (KNV)
ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.
2 ಸಮುವೇಲನು 18 : 26 (KNV)
ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.
2 ಸಮುವೇಲನು 18 : 27 (KNV)
ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
2 ಸಮುವೇಲನು 18 : 28 (KNV)
ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
2 ಸಮುವೇಲನು 18 : 29 (KNV)
ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
2 ಸಮುವೇಲನು 18 : 30 (KNV)
ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.
2 ಸಮುವೇಲನು 18 : 31 (KNV)
ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
2 ಸಮುವೇಲನು 18 : 32 (KNV)
ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
2 ಸಮುವೇಲನು 18 : 33 (KNV)
ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: