2 ಸಮುವೇಲನು 21 : 1 (KNV)
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
2 ಸಮುವೇಲನು 21 : 2 (KNV)
ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
2 ಸಮುವೇಲನು 21 : 3 (KNV)
ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
2 ಸಮುವೇಲನು 21 : 4 (KNV)
ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
2 ಸಮುವೇಲನು 21 : 5 (KNV)
ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
2 ಸಮುವೇಲನು 21 : 6 (KNV)
ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
2 ಸಮುವೇಲನು 21 : 7 (KNV)
ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
2 ಸಮುವೇಲನು 21 : 8 (KNV)
ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
2 ಸಮುವೇಲನು 21 : 9 (KNV)
ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
2 ಸಮುವೇಲನು 21 : 10 (KNV)
ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
2 ಸಮುವೇಲನು 21 : 11 (KNV)
ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.
2 ಸಮುವೇಲನು 21 : 12 (KNV)
ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
2 ಸಮುವೇಲನು 21 : 13 (KNV)
ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
2 ಸಮುವೇಲನು 21 : 14 (KNV)
ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
2 ಸಮುವೇಲನು 21 : 15 (KNV)
ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
2 ಸಮುವೇಲನು 21 : 16 (KNV)
ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
2 ಸಮುವೇಲನು 21 : 17 (KNV)
ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
2 ಸಮುವೇಲನು 21 : 18 (KNV)
ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು.
2 ಸಮುವೇಲನು 21 : 19 (KNV)
ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
2 ಸಮುವೇಲನು 21 : 20 (KNV)
ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
2 ಸಮುವೇಲನು 21 : 21 (KNV)
ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
2 ಸಮುವೇಲನು 21 : 22 (KNV)
ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.

1 2 3 4 5 6 7 8 9 10 11 12 13 14 15 16 17 18 19 20 21 22