2 ಸಮುವೇಲನು 8 : 1 (KNV)
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
2 ಸಮುವೇಲನು 8 : 2 (KNV)
ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
2 ಸಮುವೇಲನು 8 : 3 (KNV)
ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
2 ಸಮುವೇಲನು 8 : 4 (KNV)
ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
2 ಸಮುವೇಲನು 8 : 5 (KNV)
ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
2 ಸಮುವೇಲನು 8 : 6 (KNV)
ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
2 ಸಮುವೇಲನು 8 : 7 (KNV)
ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
2 ಸಮುವೇಲನು 8 : 8 (KNV)
ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
2 ಸಮುವೇಲನು 8 : 9 (KNV)
ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
2 ಸಮುವೇಲನು 8 : 10 (KNV)
ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
2 ಸಮುವೇಲನು 8 : 11 (KNV)
ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
2 ಸಮುವೇಲನು 8 : 12 (KNV)
ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
2 ಸಮುವೇಲನು 8 : 13 (KNV)
ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
2 ಸಮುವೇಲನು 8 : 14 (KNV)
ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
2 ಸಮುವೇಲನು 8 : 15 (KNV)
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
2 ಸಮುವೇಲನು 8 : 16 (KNV)
ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
2 ಸಮುವೇಲನು 8 : 17 (KNV)
ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.
2 ಸಮುವೇಲನು 8 : 18 (KNV)
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
❮
❯