2 ಥೆಸಲೊನೀಕದವರಿಗೆ 3 : 1 (KNV)
ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
2 ಥೆಸಲೊನೀಕದವರಿಗೆ 3 : 2 (KNV)
ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
2 ಥೆಸಲೊನೀಕದವರಿಗೆ 3 : 3 (KNV)
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
2 ಥೆಸಲೊನೀಕದವರಿಗೆ 3 : 4 (KNV)
ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.
2 ಥೆಸಲೊನೀಕದವರಿಗೆ 3 : 5 (KNV)
ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
2 ಥೆಸಲೊನೀಕದವರಿಗೆ 3 : 6 (KNV)
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
2 ಥೆಸಲೊನೀಕದವರಿಗೆ 3 : 7 (KNV)
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
2 ಥೆಸಲೊನೀಕದವರಿಗೆ 3 : 8 (KNV)
ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
2 ಥೆಸಲೊನೀಕದವರಿಗೆ 3 : 9 (KNV)
ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
2 ಥೆಸಲೊನೀಕದವರಿಗೆ 3 : 10 (KNV)
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
2 ಥೆಸಲೊನೀಕದವರಿಗೆ 3 : 11 (KNV)
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
2 ಥೆಸಲೊನೀಕದವರಿಗೆ 3 : 12 (KNV)
ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
2 ಥೆಸಲೊನೀಕದವರಿಗೆ 3 : 13 (KNV)
ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
2 ಥೆಸಲೊನೀಕದವರಿಗೆ 3 : 14 (KNV)
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
2 ಥೆಸಲೊನೀಕದವರಿಗೆ 3 : 15 (KNV)
ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
2 ಥೆಸಲೊನೀಕದವರಿಗೆ 3 : 16 (KNV)
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
2 ಥೆಸಲೊನೀಕದವರಿಗೆ 3 : 17 (KNV)
ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.
2 ಥೆಸಲೊನೀಕದವರಿಗೆ 3 : 18 (KNV)
ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
❮
❯