2 ತಿಮೊಥೆಯನಿಗೆ 1 : 1 (KNV)
ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
2 ತಿಮೊಥೆಯನಿಗೆ 1 : 2 (KNV)
ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
2 ತಿಮೊಥೆಯನಿಗೆ 1 : 3 (KNV)
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
2 ತಿಮೊಥೆಯನಿಗೆ 1 : 4 (KNV)
ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
2 ತಿಮೊಥೆಯನಿಗೆ 1 : 5 (KNV)
ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
2 ತಿಮೊಥೆಯನಿಗೆ 1 : 6 (KNV)
ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
2 ತಿಮೊಥೆಯನಿಗೆ 1 : 7 (KNV)
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
2 ತಿಮೊಥೆಯನಿಗೆ 1 : 8 (KNV)
ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
2 ತಿಮೊಥೆಯನಿಗೆ 1 : 9 (KNV)
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
2 ತಿಮೊಥೆಯನಿಗೆ 1 : 10 (KNV)
ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
2 ತಿಮೊಥೆಯನಿಗೆ 1 : 11 (KNV)
ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
2 ತಿಮೊಥೆಯನಿಗೆ 1 : 12 (KNV)
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
2 ತಿಮೊಥೆಯನಿಗೆ 1 : 13 (KNV)
ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
2 ತಿಮೊಥೆಯನಿಗೆ 1 : 14 (KNV)
ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
2 ತಿಮೊಥೆಯನಿಗೆ 1 : 15 (KNV)
ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
2 ತಿಮೊಥೆಯನಿಗೆ 1 : 16 (KNV)
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
2 ತಿಮೊಥೆಯನಿಗೆ 1 : 17 (KNV)
ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.
2 ತಿಮೊಥೆಯನಿಗೆ 1 : 18 (KNV)
ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

1 2 3 4 5 6 7 8 9 10 11 12 13 14 15 16 17 18