ಅಪೊಸ್ತಲರ ಕೃತ್ಯಗ 12 : 1 (KNV)
ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
ಅಪೊಸ್ತಲರ ಕೃತ್ಯಗ 12 : 2 (KNV)
ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
ಅಪೊಸ್ತಲರ ಕೃತ್ಯಗ 12 : 3 (KNV)
ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
ಅಪೊಸ್ತಲರ ಕೃತ್ಯಗ 12 : 4 (KNV)
ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
ಅಪೊಸ್ತಲರ ಕೃತ್ಯಗ 12 : 5 (KNV)
ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
ಅಪೊಸ್ತಲರ ಕೃತ್ಯಗ 12 : 6 (KNV)
ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
ಅಪೊಸ್ತಲರ ಕೃತ್ಯಗ 12 : 7 (KNV)
ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
ಅಪೊಸ್ತಲರ ಕೃತ್ಯಗ 12 : 8 (KNV)
ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
ಅಪೊಸ್ತಲರ ಕೃತ್ಯಗ 12 : 9 (KNV)
ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
ಅಪೊಸ್ತಲರ ಕೃತ್ಯಗ 12 : 10 (KNV)
ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.
ಅಪೊಸ್ತಲರ ಕೃತ್ಯಗ 12 : 11 (KNV)
ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
ಅಪೊಸ್ತಲರ ಕೃತ್ಯಗ 12 : 12 (KNV)
ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
ಅಪೊಸ್ತಲರ ಕೃತ್ಯಗ 12 : 13 (KNV)
ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
ಅಪೊಸ್ತಲರ ಕೃತ್ಯಗ 12 : 14 (KNV)
ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.
ಅಪೊಸ್ತಲರ ಕೃತ್ಯಗ 12 : 15 (KNV)
ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
ಅಪೊಸ್ತಲರ ಕೃತ್ಯಗ 12 : 16 (KNV)
ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
ಅಪೊಸ್ತಲರ ಕೃತ್ಯಗ 12 : 17 (KNV)
ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
ಅಪೊಸ್ತಲರ ಕೃತ್ಯಗ 12 : 18 (KNV)
ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
ಅಪೊಸ್ತಲರ ಕೃತ್ಯಗ 12 : 19 (KNV)
ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
ಅಪೊಸ್ತಲರ ಕೃತ್ಯಗ 12 : 20 (KNV)
ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
ಅಪೊಸ್ತಲರ ಕೃತ್ಯಗ 12 : 21 (KNV)
ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
ಅಪೊಸ್ತಲರ ಕೃತ್ಯಗ 12 : 22 (KNV)
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
ಅಪೊಸ್ತಲರ ಕೃತ್ಯಗ 12 : 23 (KNV)
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಅಪೊಸ್ತಲರ ಕೃತ್ಯಗ 12 : 24 (KNV)
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.
ಅಪೊಸ್ತಲರ ಕೃತ್ಯಗ 12 : 25 (KNV)
ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
❮
❯