ಅಪೊಸ್ತಲರ ಕೃತ್ಯಗ 22 : 1 (KNV)
ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
ಅಪೊಸ್ತಲರ ಕೃತ್ಯಗ 22 : 2 (KNV)
(ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು--
ಅಪೊಸ್ತಲರ ಕೃತ್ಯಗ 22 : 3 (KNV)
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ಅಪೊಸ್ತಲರ ಕೃತ್ಯಗ 22 : 4 (KNV)
ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
ಅಪೊಸ್ತಲರ ಕೃತ್ಯಗ 22 : 5 (KNV)
ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
ಅಪೊಸ್ತಲರ ಕೃತ್ಯಗ 22 : 6 (KNV)
ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
ಅಪೊಸ್ತಲರ ಕೃತ್ಯಗ 22 : 7 (KNV)
ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
ಅಪೊಸ್ತಲರ ಕೃತ್ಯಗ 22 : 8 (KNV)
ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
ಅಪೊಸ್ತಲರ ಕೃತ್ಯಗ 22 : 9 (KNV)
ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
ಅಪೊಸ್ತಲರ ಕೃತ್ಯಗ 22 : 10 (KNV)
ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 22 : 11 (KNV)
ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
ಅಪೊಸ್ತಲರ ಕೃತ್ಯಗ 22 : 12 (KNV)
ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
ಅಪೊಸ್ತಲರ ಕೃತ್ಯಗ 22 : 13 (KNV)
ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
ಅಪೊಸ್ತಲರ ಕೃತ್ಯಗ 22 : 14 (KNV)
ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
ಅಪೊಸ್ತಲರ ಕೃತ್ಯಗ 22 : 15 (KNV)
ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
ಅಪೊಸ್ತಲರ ಕೃತ್ಯಗ 22 : 16 (KNV)
ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 22 : 17 (KNV)
ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
ಅಪೊಸ್ತಲರ ಕೃತ್ಯಗ 22 : 18 (KNV)
ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
ಅಪೊಸ್ತಲರ ಕೃತ್ಯಗ 22 : 19 (KNV)
ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
ಅಪೊಸ್ತಲರ ಕೃತ್ಯಗ 22 : 20 (KNV)
ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
ಅಪೊಸ್ತಲರ ಕೃತ್ಯಗ 22 : 21 (KNV)
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಅಪೊಸ್ತಲರ ಕೃತ್ಯಗ 22 : 22 (KNV)
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ಅಪೊಸ್ತಲರ ಕೃತ್ಯಗ 22 : 23 (KNV)
ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
ಅಪೊಸ್ತಲರ ಕೃತ್ಯಗ 22 : 24 (KNV)
ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
ಅಪೊಸ್ತಲರ ಕೃತ್ಯಗ 22 : 25 (KNV)
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
ಅಪೊಸ್ತಲರ ಕೃತ್ಯಗ 22 : 26 (KNV)
ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 22 : 27 (KNV)
ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
ಅಪೊಸ್ತಲರ ಕೃತ್ಯಗ 22 : 28 (KNV)
ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 22 : 29 (KNV)
ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.
ಅಪೊಸ್ತಲರ ಕೃತ್ಯಗ 22 : 30 (KNV)
ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30