ಅಪೊಸ್ತಲರ ಕೃತ್ಯಗ 8 : 1 (KNV)
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ಅಪೊಸ್ತಲರ ಕೃತ್ಯಗ 8 : 2 (KNV)
ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
ಅಪೊಸ್ತಲರ ಕೃತ್ಯಗ 8 : 3 (KNV)
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
ಅಪೊಸ್ತಲರ ಕೃತ್ಯಗ 8 : 4 (KNV)
ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
ಅಪೊಸ್ತಲರ ಕೃತ್ಯಗ 8 : 5 (KNV)
ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
ಅಪೊಸ್ತಲರ ಕೃತ್ಯಗ 8 : 6 (KNV)
ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
ಅಪೊಸ್ತಲರ ಕೃತ್ಯಗ 8 : 7 (KNV)
ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
ಅಪೊಸ್ತಲರ ಕೃತ್ಯಗ 8 : 8 (KNV)
ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
ಅಪೊಸ್ತಲರ ಕೃತ್ಯಗ 8 : 9 (KNV)
ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
ಅಪೊಸ್ತಲರ ಕೃತ್ಯಗ 8 : 10 (KNV)
ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
ಅಪೊಸ್ತಲರ ಕೃತ್ಯಗ 8 : 11 (KNV)
ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
ಅಪೊಸ್ತಲರ ಕೃತ್ಯಗ 8 : 12 (KNV)
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
ಅಪೊಸ್ತಲರ ಕೃತ್ಯಗ 8 : 13 (KNV)
ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
ಅಪೊಸ್ತಲರ ಕೃತ್ಯಗ 8 : 14 (KNV)
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 8 : 15 (KNV)
ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
ಅಪೊಸ್ತಲರ ಕೃತ್ಯಗ 8 : 16 (KNV)
(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
ಅಪೊಸ್ತಲರ ಕೃತ್ಯಗ 8 : 17 (KNV)
ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
ಅಪೊಸ್ತಲರ ಕೃತ್ಯಗ 8 : 18 (KNV)
ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
ಅಪೊಸ್ತಲರ ಕೃತ್ಯಗ 8 : 19 (KNV)
ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
ಅಪೊಸ್ತಲರ ಕೃತ್ಯಗ 8 : 20 (KNV)
ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
ಅಪೊಸ್ತಲರ ಕೃತ್ಯಗ 8 : 21 (KNV)
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಅಪೊಸ್ತಲರ ಕೃತ್ಯಗ 8 : 22 (KNV)
ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
ಅಪೊಸ್ತಲರ ಕೃತ್ಯಗ 8 : 23 (KNV)
ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
ಅಪೊಸ್ತಲರ ಕೃತ್ಯಗ 8 : 24 (KNV)
ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 8 : 25 (KNV)
ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
ಅಪೊಸ್ತಲರ ಕೃತ್ಯಗ 8 : 26 (KNV)
ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 8 : 27 (KNV)
ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
ಅಪೊಸ್ತಲರ ಕೃತ್ಯಗ 8 : 28 (KNV)
ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;
ಅಪೊಸ್ತಲರ ಕೃತ್ಯಗ 8 : 29 (KNV)
ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 8 : 30 (KNV)
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
ಅಪೊಸ್ತಲರ ಕೃತ್ಯಗ 8 : 31 (KNV)
ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
ಅಪೊಸ್ತಲರ ಕೃತ್ಯಗ 8 : 32 (KNV)
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
ಅಪೊಸ್ತಲರ ಕೃತ್ಯಗ 8 : 33 (KNV)
ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
ಅಪೊಸ್ತಲರ ಕೃತ್ಯಗ 8 : 34 (KNV)
ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
ಅಪೊಸ್ತಲರ ಕೃತ್ಯಗ 8 : 35 (KNV)
ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
ಅಪೊಸ್ತಲರ ಕೃತ್ಯಗ 8 : 36 (KNV)
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ಅಪೊಸ್ತಲರ ಕೃತ್ಯಗ 8 : 37 (KNV)
ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
ಅಪೊಸ್ತಲರ ಕೃತ್ಯಗ 8 : 38 (KNV)
ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.
ಅಪೊಸ್ತಲರ ಕೃತ್ಯಗ 8 : 39 (KNV)
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.
ಅಪೊಸ್ತಲರ ಕೃತ್ಯಗ 8 : 40 (KNV)
ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
❮
❯