ಕೊಲೊಸ್ಸೆಯವರಿಗೆ 1 : 1 (KNV)
ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ
ಕೊಲೊಸ್ಸೆಯವರಿಗೆ 1 : 2 (KNV)
ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಕೊಲೊಸ್ಸೆಯವರಿಗೆ 1 : 3 (KNV)
ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
ಕೊಲೊಸ್ಸೆಯವರಿಗೆ 1 : 4 (KNV)
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
ಕೊಲೊಸ್ಸೆಯವರಿಗೆ 1 : 5 (KNV)
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ಕೊಲೊಸ್ಸೆಯವರಿಗೆ 1 : 6 (KNV)
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
ಕೊಲೊಸ್ಸೆಯವರಿಗೆ 1 : 7 (KNV)
ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
ಕೊಲೊಸ್ಸೆಯವರಿಗೆ 1 : 8 (KNV)
ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
ಕೊಲೊಸ್ಸೆಯವರಿಗೆ 1 : 9 (KNV)
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ಕೊಲೊಸ್ಸೆಯವರಿಗೆ 1 : 10 (KNV)
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ಕೊಲೊಸ್ಸೆಯವರಿಗೆ 1 : 11 (KNV)
ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
ಕೊಲೊಸ್ಸೆಯವರಿಗೆ 1 : 12 (KNV)
ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
ಕೊಲೊಸ್ಸೆಯವರಿಗೆ 1 : 13 (KNV)
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ಕೊಲೊಸ್ಸೆಯವರಿಗೆ 1 : 14 (KNV)
ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
ಕೊಲೊಸ್ಸೆಯವರಿಗೆ 1 : 15 (KNV)
ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
ಕೊಲೊಸ್ಸೆಯವರಿಗೆ 1 : 16 (KNV)
ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
ಕೊಲೊಸ್ಸೆಯವರಿಗೆ 1 : 17 (KNV)
ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
ಕೊಲೊಸ್ಸೆಯವರಿಗೆ 1 : 18 (KNV)
ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
ಕೊಲೊಸ್ಸೆಯವರಿಗೆ 1 : 19 (KNV)
ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
ಕೊಲೊಸ್ಸೆಯವರಿಗೆ 1 : 20 (KNV)
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ಕೊಲೊಸ್ಸೆಯವರಿಗೆ 1 : 21 (KNV)
ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
ಕೊಲೊಸ್ಸೆಯವರಿಗೆ 1 : 22 (KNV)
ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
ಕೊಲೊಸ್ಸೆಯವರಿಗೆ 1 : 23 (KNV)
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಕೊಲೊಸ್ಸೆಯವರಿಗೆ 1 : 24 (KNV)
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ಕೊಲೊಸ್ಸೆಯವರಿಗೆ 1 : 25 (KNV)
ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
ಕೊಲೊಸ್ಸೆಯವರಿಗೆ 1 : 26 (KNV)
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
ಕೊಲೊಸ್ಸೆಯವರಿಗೆ 1 : 27 (KNV)
ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
ಕೊಲೊಸ್ಸೆಯವರಿಗೆ 1 : 28 (KNV)
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.
ಕೊಲೊಸ್ಸೆಯವರಿಗೆ 1 : 29 (KNV)
ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29