ಕೊಲೊಸ್ಸೆಯವರಿಗೆ 2 : 1 (KNV)
ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
ಕೊಲೊಸ್ಸೆಯವರಿಗೆ 2 : 2 (KNV)
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ಕೊಲೊಸ್ಸೆಯವರಿಗೆ 2 : 3 (KNV)
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ಕೊಲೊಸ್ಸೆಯವರಿಗೆ 2 : 4 (KNV)
ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
ಕೊಲೊಸ್ಸೆಯವರಿಗೆ 2 : 5 (KNV)
ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
ಕೊಲೊಸ್ಸೆಯವರಿಗೆ 2 : 6 (KNV)
ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
ಕೊಲೊಸ್ಸೆಯವರಿಗೆ 2 : 7 (KNV)
ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
ಕೊಲೊಸ್ಸೆಯವರಿಗೆ 2 : 8 (KNV)
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
ಕೊಲೊಸ್ಸೆಯವರಿಗೆ 2 : 9 (KNV)
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ಕೊಲೊಸ್ಸೆಯವರಿಗೆ 2 : 10 (KNV)
ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
ಕೊಲೊಸ್ಸೆಯವರಿಗೆ 2 : 11 (KNV)
ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
ಕೊಲೊಸ್ಸೆಯವರಿಗೆ 2 : 12 (KNV)
ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
ಕೊಲೊಸ್ಸೆಯವರಿಗೆ 2 : 13 (KNV)
ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
ಕೊಲೊಸ್ಸೆಯವರಿಗೆ 2 : 14 (KNV)
ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
ಕೊಲೊಸ್ಸೆಯವರಿಗೆ 2 : 15 (KNV)
ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
ಕೊಲೊಸ್ಸೆಯವರಿಗೆ 2 : 16 (KNV)
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
ಕೊಲೊಸ್ಸೆಯವರಿಗೆ 2 : 17 (KNV)
ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
ಕೊಲೊಸ್ಸೆಯವರಿಗೆ 2 : 18 (KNV)
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
ಕೊಲೊಸ್ಸೆಯವರಿಗೆ 2 : 19 (KNV)
ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
ಕೊಲೊಸ್ಸೆಯವರಿಗೆ 2 : 20 (KNV)
ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
ಕೊಲೊಸ್ಸೆಯವರಿಗೆ 2 : 21 (KNV)
ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
ಕೊಲೊಸ್ಸೆಯವರಿಗೆ 2 : 22 (KNV)
(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);
ಕೊಲೊಸ್ಸೆಯವರಿಗೆ 2 : 23 (KNV)
ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.

1 2 3 4 5 6 7 8 9 10 11 12 13 14 15 16 17 18 19 20 21 22 23