ಕೊಲೊಸ್ಸೆಯವರಿಗೆ 3 : 1 (KNV)
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ಕೊಲೊಸ್ಸೆಯವರಿಗೆ 3 : 2 (KNV)
ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
ಕೊಲೊಸ್ಸೆಯವರಿಗೆ 3 : 3 (KNV)
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ಕೊಲೊಸ್ಸೆಯವರಿಗೆ 3 : 4 (KNV)
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
ಕೊಲೊಸ್ಸೆಯವರಿಗೆ 3 : 5 (KNV)
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ಕೊಲೊಸ್ಸೆಯವರಿಗೆ 3 : 6 (KNV)
ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
ಕೊಲೊಸ್ಸೆಯವರಿಗೆ 3 : 7 (KNV)
ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
ಕೊಲೊಸ್ಸೆಯವರಿಗೆ 3 : 8 (KNV)
ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
ಕೊಲೊಸ್ಸೆಯವರಿಗೆ 3 : 9 (KNV)
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
ಕೊಲೊಸ್ಸೆಯವರಿಗೆ 3 : 10 (KNV)
ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ಕೊಲೊಸ್ಸೆಯವರಿಗೆ 3 : 11 (KNV)
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ಕೊಲೊಸ್ಸೆಯವರಿಗೆ 3 : 12 (KNV)
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಕೊಲೊಸ್ಸೆಯವರಿಗೆ 3 : 13 (KNV)
ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
ಕೊಲೊಸ್ಸೆಯವರಿಗೆ 3 : 14 (KNV)
ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
ಕೊಲೊಸ್ಸೆಯವರಿಗೆ 3 : 15 (KNV)
ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
ಕೊಲೊಸ್ಸೆಯವರಿಗೆ 3 : 16 (KNV)
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಕೊಲೊಸ್ಸೆಯವರಿಗೆ 3 : 17 (KNV)
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ಕೊಲೊಸ್ಸೆಯವರಿಗೆ 3 : 18 (KNV)
ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
ಕೊಲೊಸ್ಸೆಯವರಿಗೆ 3 : 19 (KNV)
ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
ಕೊಲೊಸ್ಸೆಯವರಿಗೆ 3 : 20 (KNV)
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಕೊಲೊಸ್ಸೆಯವರಿಗೆ 3 : 21 (KNV)
ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.
ಕೊಲೊಸ್ಸೆಯವರಿಗೆ 3 : 22 (KNV)
ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
ಕೊಲೊಸ್ಸೆಯವರಿಗೆ 3 : 23 (KNV)
ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;
ಕೊಲೊಸ್ಸೆಯವರಿಗೆ 3 : 24 (KNV)
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.
ಕೊಲೊಸ್ಸೆಯವರಿಗೆ 3 : 25 (KNV)
ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25