ದಾನಿಯೇಲನು 12 : 1 (KNV)
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ದಾನಿಯೇಲನು 12 : 2 (KNV)
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ದಾನಿಯೇಲನು 12 : 3 (KNV)
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ದಾನಿಯೇಲನು 12 : 4 (KNV)
ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
ದಾನಿಯೇಲನು 12 : 5 (KNV)
ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
ದಾನಿಯೇಲನು 12 : 6 (KNV)
ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
ದಾನಿಯೇಲನು 12 : 7 (KNV)
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
ದಾನಿಯೇಲನು 12 : 8 (KNV)
ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
ದಾನಿಯೇಲನು 12 : 9 (KNV)
ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
ದಾನಿಯೇಲನು 12 : 10 (KNV)
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
ದಾನಿಯೇಲನು 12 : 11 (KNV)
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ದಾನಿಯೇಲನು 12 : 12 (KNV)
ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.
ದಾನಿಯೇಲನು 12 : 13 (KNV)
ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
❮
❯
1
2
3
4
5
6
7
8
9
10
11
12
13