ದಾನಿಯೇಲನು 7 : 1 (KNV)
ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
ದಾನಿಯೇಲನು 7 : 2 (KNV)
ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
ದಾನಿಯೇಲನು 7 : 3 (KNV)
ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
ದಾನಿಯೇಲನು 7 : 4 (KNV)
ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.
ದಾನಿಯೇಲನು 7 : 5 (KNV)
ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
ದಾನಿಯೇಲನು 7 : 6 (KNV)
ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ದಾನಿಯೇಲನು 7 : 7 (KNV)
ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
ದಾನಿಯೇಲನು 7 : 8 (KNV)
ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
ದಾನಿಯೇಲನು 7 : 9 (KNV)
ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ದಾನಿಯೇಲನು 7 : 10 (KNV)
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ದಾನಿಯೇಲನು 7 : 11 (KNV)
ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
ದಾನಿಯೇಲನು 7 : 12 (KNV)
ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
ದಾನಿಯೇಲನು 7 : 13 (KNV)
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ದಾನಿಯೇಲನು 7 : 14 (KNV)
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ದಾನಿಯೇಲನು 7 : 15 (KNV)
ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
ದಾನಿಯೇಲನು 7 : 16 (KNV)
ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
ದಾನಿಯೇಲನು 7 : 17 (KNV)
ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
ದಾನಿಯೇಲನು 7 : 18 (KNV)
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ದಾನಿಯೇಲನು 7 : 19 (KNV)
ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
ದಾನಿಯೇಲನು 7 : 20 (KNV)
ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
ದಾನಿಯೇಲನು 7 : 21 (KNV)
ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
ದಾನಿಯೇಲನು 7 : 22 (KNV)
ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
ದಾನಿಯೇಲನು 7 : 23 (KNV)
ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
ದಾನಿಯೇಲನು 7 : 24 (KNV)
ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
ದಾನಿಯೇಲನು 7 : 25 (KNV)
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ದಾನಿಯೇಲನು 7 : 26 (KNV)
ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
ದಾನಿಯೇಲನು 7 : 27 (KNV)
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.
ದಾನಿಯೇಲನು 7 : 28 (KNV)
ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
❮
❯