ಧರ್ಮೋಪದೇಶಕಾಂಡ 19 : 1 (KNV)
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
ಧರ್ಮೋಪದೇಶಕಾಂಡ 19 : 2 (KNV)
ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
ಧರ್ಮೋಪದೇಶಕಾಂಡ 19 : 3 (KNV)
ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
ಧರ್ಮೋಪದೇಶಕಾಂಡ 19 : 4 (KNV)
ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
ಧರ್ಮೋಪದೇಶಕಾಂಡ 19 : 5 (KNV)
ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
ಧರ್ಮೋಪದೇಶಕಾಂಡ 19 : 6 (KNV)
ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
ಧರ್ಮೋಪದೇಶಕಾಂಡ 19 : 7 (KNV)
ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
ಧರ್ಮೋಪದೇಶಕಾಂಡ 19 : 8 (KNV)
ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
ಧರ್ಮೋಪದೇಶಕಾಂಡ 19 : 9 (KNV)
ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ
ಧರ್ಮೋಪದೇಶಕಾಂಡ 19 : 10 (KNV)
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
ಧರ್ಮೋಪದೇಶಕಾಂಡ 19 : 11 (KNV)
ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
ಧರ್ಮೋಪದೇಶಕಾಂಡ 19 : 12 (KNV)
ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
ಧರ್ಮೋಪದೇಶಕಾಂಡ 19 : 13 (KNV)
ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
ಧರ್ಮೋಪದೇಶಕಾಂಡ 19 : 14 (KNV)
ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
ಧರ್ಮೋಪದೇಶಕಾಂಡ 19 : 15 (KNV)
ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
ಧರ್ಮೋಪದೇಶಕಾಂಡ 19 : 16 (KNV)
ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
ಧರ್ಮೋಪದೇಶಕಾಂಡ 19 : 17 (KNV)
ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
ಧರ್ಮೋಪದೇಶಕಾಂಡ 19 : 18 (KNV)
ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
ಧರ್ಮೋಪದೇಶಕಾಂಡ 19 : 19 (KNV)
ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
ಧರ್ಮೋಪದೇಶಕಾಂಡ 19 : 20 (KNV)
ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.
ಧರ್ಮೋಪದೇಶಕಾಂಡ 19 : 21 (KNV)
ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
❮
❯