ಧರ್ಮೋಪದೇಶಕಾಂಡ 21 : 1 (KNV)
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
ಧರ್ಮೋಪದೇಶಕಾಂಡ 21 : 2 (KNV)
ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.
ಧರ್ಮೋಪದೇಶಕಾಂಡ 21 : 3 (KNV)
ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.
ಧರ್ಮೋಪದೇಶಕಾಂಡ 21 : 4 (KNV)
ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
ಧರ್ಮೋಪದೇಶಕಾಂಡ 21 : 5 (KNV)
ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
ಧರ್ಮೋಪದೇಶಕಾಂಡ 21 : 6 (KNV)
ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು
ಧರ್ಮೋಪದೇಶಕಾಂಡ 21 : 7 (KNV)
ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
ಧರ್ಮೋಪದೇಶಕಾಂಡ 21 : 8 (KNV)
ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
ಧರ್ಮೋಪದೇಶಕಾಂಡ 21 : 9 (KNV)
ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
ಧರ್ಮೋಪದೇಶಕಾಂಡ 21 : 10 (KNV)
ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
ಧರ್ಮೋಪದೇಶಕಾಂಡ 21 : 11 (KNV)
ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
ಧರ್ಮೋಪದೇಶಕಾಂಡ 21 : 12 (KNV)
ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,
ಧರ್ಮೋಪದೇಶಕಾಂಡ 21 : 13 (KNV)
ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
ಧರ್ಮೋಪದೇಶಕಾಂಡ 21 : 14 (KNV)
ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
ಧರ್ಮೋಪದೇಶಕಾಂಡ 21 : 15 (KNV)
ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
ಧರ್ಮೋಪದೇಶಕಾಂಡ 21 : 16 (KNV)
ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
ಧರ್ಮೋಪದೇಶಕಾಂಡ 21 : 17 (KNV)
ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
ಧರ್ಮೋಪದೇಶಕಾಂಡ 21 : 18 (KNV)
ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
ಧರ್ಮೋಪದೇಶಕಾಂಡ 21 : 19 (KNV)
ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು
ಧರ್ಮೋಪದೇಶಕಾಂಡ 21 : 20 (KNV)
ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
ಧರ್ಮೋಪದೇಶಕಾಂಡ 21 : 21 (KNV)
ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
ಧರ್ಮೋಪದೇಶಕಾಂಡ 21 : 22 (KNV)
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಧರ್ಮೋಪದೇಶಕಾಂಡ 21 : 23 (KNV)
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: