ಧರ್ಮೋಪದೇಶಕಾಂಡ 24 : 1 (KNV)
ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
ಧರ್ಮೋಪದೇಶಕಾಂಡ 24 : 2 (KNV)
ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು.
ಧರ್ಮೋಪದೇಶಕಾಂಡ 24 : 3 (KNV)
ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
ಧರ್ಮೋಪದೇಶಕಾಂಡ 24 : 4 (KNV)
ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
ಧರ್ಮೋಪದೇಶಕಾಂಡ 24 : 5 (KNV)
ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
ಧರ್ಮೋಪದೇಶಕಾಂಡ 24 : 6 (KNV)
ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
ಧರ್ಮೋಪದೇಶಕಾಂಡ 24 : 7 (KNV)
ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
ಧರ್ಮೋಪದೇಶಕಾಂಡ 24 : 8 (KNV)
ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
ಧರ್ಮೋಪದೇಶಕಾಂಡ 24 : 9 (KNV)
ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.
ಧರ್ಮೋಪದೇಶಕಾಂಡ 24 : 10 (KNV)
ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.
ಧರ್ಮೋಪದೇಶಕಾಂಡ 24 : 11 (KNV)
ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.
ಧರ್ಮೋಪದೇಶಕಾಂಡ 24 : 12 (KNV)
ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ.
ಧರ್ಮೋಪದೇಶಕಾಂಡ 24 : 13 (KNV)
ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
ಧರ್ಮೋಪದೇಶಕಾಂಡ 24 : 14 (KNV)
ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
ಧರ್ಮೋಪದೇಶಕಾಂಡ 24 : 15 (KNV)
ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
ಧರ್ಮೋಪದೇಶಕಾಂಡ 24 : 16 (KNV)
ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
ಧರ್ಮೋಪದೇಶಕಾಂಡ 24 : 17 (KNV)
ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
ಧರ್ಮೋಪದೇಶಕಾಂಡ 24 : 18 (KNV)
ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ಧರ್ಮೋಪದೇಶಕಾಂಡ 24 : 19 (KNV)
ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
ಧರ್ಮೋಪದೇಶಕಾಂಡ 24 : 20 (KNV)
ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
ಧರ್ಮೋಪದೇಶಕಾಂಡ 24 : 21 (KNV)
ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
ಧರ್ಮೋಪದೇಶಕಾಂಡ 24 : 22 (KNV)
ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: